ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಅಮೆರಿಕ ಅಧ್ಯಕ್ಷ ಚುನಾವಣೆ: ಟ್ರಂಪ್ ನಂತರದ ಸ್ಥಾನದಲ್ಲಿ ವಿವೇಕ್…

admin by admin
August 25, 2023
in Saaksha Special, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಅಮೆರಿಕ ಅಧ್ಯಕ್ಷ ಚುನಾವಣೆ: ಟ್ರಂಪ್ ನಂತರದ ಸ್ಥಾನದಲ್ಲಿ ವಿವೇಕ್

US Presidential Election: Vivek takes second place after Trump

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ಜಗತ್ತಿನ ದೊಡ್ಡಣ್ಣ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸಜ್ಜಾಗುತ್ತಿದೆ. ಈ ಚುನಾವಣೆ ನಡೆದಾಗಲೂ ಅಲ್ಲೊಂದು ಭಾರತದ ನಂಟು ಇದ್ದೇ ಇರುತ್ತದೆ. ಈ ಬಾರಿಯೂ, ಅಂದರೆ 2024ರ ಚುನಾವಣೆಗೂ ಭಾರತದ ನಂಟು ಜೋರಾಗಿಯೇ ಇದೆ. ಹೌದ ಈ ಬಾರಿಯ ಚುನಾವಣೆಯಲ್ಲೂ ಭಾರತ ಮೂಲದ ವಿವೇಕ್‌ ಗಣಪತಿ ರಾಮಸ್ವಾಮಿ ಎಂಬ 38ರ ಹರೆಯದ ವ್ಯಕ್ತಿಯ ಹೆಸರೂ ಮುನ್ನೆಲೆಗೆ ಬಂದಿದೆ. 2024ರ ಅಮೆರಿಕ ಚುನಾವಣೆಯಲ್ಲಿ ರಿಪಬ್ಲಿಕನ್‌ ಅಭ್ಯರ್ಥಿಯಾಗಿ ವಿವೇಕ್‌ ಕಣಕ್ಕಿಳಿದಿದ್ದಾರೆ. ಬೃಹತ್‌ ವಾಣಿಜ್ಯೋದ್ಯಮಿಯಾಗಿ, ತಮ್ಮ ಮಾತಿನ ಶೈಲಿಯಿಂದಲೇ ಗುರುತಿಸಿಕೊಂಡಿರುವ ವಿವೇಕ್‌ ಬಗ್ಗೆ ಎಲಾನ್‌ ಮಸ್ಕ್‌ ಸಹ ಮೆಚ್ಚುಗೆ ವ್ಯಕ್ತಪಡಿಸಿ ಬೆಂಬಲ ಸೂಚಿಸಿದ್ದಾರೆ.

ಇದೀಗ ಈ ಅಧ್ಯಕ್ಷೀಯ ಚುನಾವಣೆ ರೇಸ್‌ನಲ್ಲಿ ಗಮನ ಸೆಳೆವ ಬೆಳವಣಿಗೆಯೊಂದು ನಡೆದಿದೆ. ರಿಪಬ್ಲಿಕನ್ ಪಕ್ಷದ ಆಂತರಿಕ ಚುನಾವಣೆಯಲ್ಲಿ ಉದ್ಯಮಿ ವಿವೇಕ್ ರಾಮಸ್ವಾಮಿ ಎರಡನೇ ಸ್ಥಾನಕ್ಕೇರಿದ್ದಾರೆ.

ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಸ್ಥಾನದಲ್ಲಿದ್ದು, ಒಂದು ವೇಳೆ ಚುನಾವಣೆಗೂ ಮೊದಲು ಟ್ರಂಪ್‌ ಶಿಕ್ಷೆಗೆ ಒಳಗಾದರೆ ವಿವೇಕ್‌ ಅವರಿಗೆ ಅವಕಾಶದ ಬಾಗಿಲುಗಳು ತೆರೆಯಲಿವೆ. ರಿಪಬ್ಲಿಕನ್ ಪಕ್ಷದಲ್ಲಿ ಶೇ.56ರಷ್ಟು ಮತ ಗಳಿಸಿಕೊಂಡಿ ರುವ ಟ್ರಂಪ್ ಅಧ್ಯಕ್ಷೀಯ ಚುನಾವಣೆಗೆ ಪಕ್ಷದ ಪ್ರಮುಖ ಅಭ್ಯರ್ಥಿಯಾಗಿದ್ದಾರೆ.

ಶೇ.10ರಷ್ಟು ಮತಗಳನ್ನು ಪಡೆದು ಕೊಂಡಿರುವ ವಿವೇಕ್ ರಾಮಸ್ವಾಮಿ ಮತ್ತು ಫ್ಲೋರಿಡಾದ ಗವರ್ನರ್ ರಾನ್ ಡೆಸ್ಯಾಂಟಿಸ್ 2ನೇ ಸ್ಥಾನದಲ್ಲಿದ್ದಾರೆ. ಜೂನ್‌ನಲ್ಲಿ ಶೇ.21ರಷ್ಟು ಮತ ಪಡೆದುಕೊಂಡಿದ್ದ ಡೆಸ್ಯಾಂಟಿಸ್ ಮತ ಇದೀಗ ಕುಸಿತ ಕಂಡಿದೆ. ಹೀಗಾಗಿ ವಿವೇಕ್ ಅವರು ಟ್ರಂಪ್ ಬಳಿಕ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಅಭ್ಯರ್ಥಿ ಎನ್ನಲಾಗುತ್ತಿದೆ.

ಹಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಂದು ವೇಳೆ ಶಿಕ್ಷೆಗೆ ಒಳಗಾಗಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವನ್ನು ಕಳೆದುಕೊಂಡರೆ, ಆ ಅವಕಾಶ ಎರಡನೇ ಸ್ಥಾನದಲ್ಲಿರುವ ವಿವೇಕ್‌ಗೆ ಲಭ್ಯವಾಗಲಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಯಾರು ಈ ವಿವೇಕ ರಾಮಸ್ವಾಮಿ

ವಿವೇಕ್ ಅವರು ಅಮೆರಿಕಕ್ಕೆ ವಲಸೆ ಹೋದ ಕೇರಳ ಮೂಲದ ದಂಪತಿಗಳ ಮಗನಾಗಿದ್ದಾರೆ. ಹಾರ್ವರ್ಡ್‌ ವಿಶ್ವವಿದ್ಯಾನಿಲಯದಲ್ಲಿ ಬಯೋಲಜಿ ವಿಷಯದಲ್ಲಿ ಪದವಿ ಪಡೆದು, ಬಳಿಕ ಯಾಲೆ ವಿವಿಯಲ್ಲಿ ಕಾನೂನು ವಿಷಯದಲ್ಲಿ ಪದವಿ ಪಡೆದಿದ್ದಾರೆ.  ಬಯೋಟೆಕ್‌ ಕಂಪೆನಿ ಶುರು ಮಾಡುವ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದ ರಾಮಸ್ವಾಮಿ, ಇದರಲ್ಲಿ ಗೆದ್ದಿದ್ದಾರೆ.

ಇತ್ತೀಚಿನವರೆಗೂ ವಿವೇಕ್‌ ರಾಮಸ್ವಾಮಿ ಅಂಥ ದೊಡ್ಡ ಸುದ್ದಿಯಲ್ಲಿ ಏನಿರಲಿಲ್ಲ. ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷೀಯ ರೇಸ್‌ನಲ್ಲಿ ಇದ್ದವರ ಪೈಕಿ ಎಲ್ಲರಲ್ಲಿ ಒಬ್ಬರಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇವರ ಭಾಷಣ, ಇವರ ನೀತಿಗಳು ರಿಪಬ್ಲಿಕನ್‌ ಪಕ್ಷದ ಸದಸ್ಯರಿಗೆ ಹಿಡಿಸುತ್ತಿವೆ. ಹೀಗಾಗಿ ದಿಢೀರನೇ ಟ್ರಂಪ್‌ ಆನಂತರದ ಸ್ಥಾನಕ್ಕೆ ರಾಮಸ್ವಾಮಿ ಏರಿದ್ದಾರೆ.

Tags: Election 2024US President
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram