ವಾಷಿಂಗ್ಟನ್, ಮೇ 28 : ಭಾರತ ಮತ್ತು ಚೀನಾ ಗಡಿಯಲ್ಲಿ ಶುರುವಾಗಿರುವ ಉದ್ವಿಗ್ನತೆ ಶಮನಕ್ಕೆ ಎರಡೂ ರಾಷ್ಟ್ರಗಳು ಬಯಸಿದರೆ ಮಧ್ಯಸ್ಥಿಕೆ ವಹಿಸಲು ತಾನು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಚೀನಾದ ಮಿಲಿಟರಿ ಸೇನೆ ಲಡಾಖ್ ಮತ್ತು ಸಿಕ್ಕಿಂನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ(ಎಲ್ಎಸಿ) ಉದ್ದಕ್ಕೂ ಗಸ್ತು ತಿರುಗುತ್ತಿದ್ದು, ಇದರಿಂದ ಆತಂಕ ಸೃಷ್ಟಿಯಾಗಿದೆ ಎಂದು ಭಾರತ ಆರೋಪಿಸಿದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಟ್ವೀಟ್ ಮಾಡಿದ್ದು, ಭಾರತ ಮತ್ತು ಚೀನಾ ನಡುವೆ ಉಲ್ಬಣಗೊಳ್ಳುತ್ತಿರುವ ಗಡಿ ವಿವಾದ ಪರಿಹರಿಸಲು ಅಮೆರಿಕ ಸಿದ್ಧವಿದ್ದು ಮಧ್ಯಸ್ಥಿಕೆ ವಹಿಸಲು ಸಿದ್ಧವಿದೆ. ಈ ಬಗ್ಗೆ ಭಾರತ ಮತ್ತು ಚೀನಾ ರಾಷ್ಟ್ರಗಳಿಗೆ ನಾವು ತಿಳಿಸಿದ್ದೇವೆ. ಧನ್ಯವಾದಗಳು ಎಂದು ಹೇಳಿದ್ದಾರೆ. ಅತ್ತ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ಭವಿಸಿರುವ ಸಮಸ್ಯೆಗೆ ಭಾರತದತ್ತ ಬೊಟ್ಟು ಮಾಡಿರುವ ಚೀನಾ, ಭಾರತೀಯ ಸೈನಿಕರು ಚೀನಾದ ಗಡಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪಿಸಿದೆ. ಚೀನಾ ವಿದೇಶಾಂಗ ಸಚಿವ ಜಾವೋ ಲಿಜಿಯಾನ್, ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಬಯಸಿರುವುದಾಗಿ ಹೇಳಿಕೊಂಡಿದ್ದಾರೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








