ಬೆಂಗಳೂರು : ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು. ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಆಯ್ಕೆಗೊಂಡರು.
ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಅಲ್ಲದೇ, ಯು.ಟಿ.ಖಾದರ್ ಅವರಿಗೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು ಎಂದು ಅವರು ಹೇಳಿದರು. ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಅಭಿನಂದನೆ ಸಲ್ಲಿಸಿದರು.