ಮಂಗಳೂರಿನಲ್ಲಿ ವಾರದ ಹಿಂದೆ ಸ್ಥಳೀಯ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಸುತ್ತಮುತ್ತಲಿನ ಜನರು ಆರೋಗ್ಯ ತಪಾಸಣೆಗೆ ಒಳಗಾಗಬೇಕೆಂದು ಮಾಜಿ ಸಚಿವ ಯು ಟಿ ಖಾದರ್ ಅವರು ಮಸೀದಿ ಮೈಕ್ ಮೂಲಕ ಮನವಿ ಮಾಡಿದ್ದಾರೆ.
ವಾರದ ಹಿಂದೆ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಆತ ಚೆಂಬುಗುಡ್ಡೆ ಮಸೀದಿಗೆ ಹಲವು ಬಾರಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಮುಸ್ಲಿಮರು ಮತ್ತು ನಾಗರಿಕರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ಖಾದರ್ ಮನವಿ ಮಾಡಿದ್ದಾರೆ.
ಜನರೆಲ್ಲರು ಆರೋಗ್ಯ ಇಲಾಖೆ ತಂಡದ ಜೊತೆ ಸಹಕರಿಸಬೇಕು. ಮಸೀದಿ ಆವರಣದಲ್ಲಿ ಆರೋಗ್ಯ ತಪಾಸಣೆಗೆ ಒಳಪಡುವಂತೆ ಯು ಟಿ ಖಾದರ್ ಮಸೀದಿ ಮೈಕ್ ನಲ್ಲಿ ಮನವಿ ಮಾಡಿದ್ದಾರೆ.








