ಟಿ 20 ವಿಶ್ವಕಪ್ : ಪಾಕಿಸ್ತಾನ ಗೆಲ್ಲುವ ಫೆವರೆಟ್ ಟೀಂ : ಉತ್ತಪ್ಪ
ದುಬೈ : ಟಿ20 ವಿಶ್ವಕಪ್-2021 ಟೂರ್ನಿ ಅಂತಿಮ ಹಂತ ತಲುಪಿದೆ.
ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ದು ನ್ಯೂಜಿಲೆಂಡ್ ಈಗಾಗಲೇ ಫೈನಲ್ ಪ್ರವೇಶಿಸಿದೆ.
ಗುರುವಾರ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ.
ಈ ಪಂದ್ಯದ ಬಗ್ಗೆ ಟೀಂ ಇಂಡಿಯಾದ ಆಟಗಾರ ರಾಬಿನ್ ಉತ್ತಪ್ಪ ಕುತೂಹಲಕಾರಿ ವ್ಯಾಖ್ಯಾನಗಳನ್ನು ಮಾಡಿದ್ದಾರೆ.
ಈ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದು ಫೈನಲ್ ತಲುಪಲಿದೆ ಎಂದು ಉತ್ತಪ್ಪ ಭವಿಷ್ಯ ನುಡಿದಿದ್ದಾರೆ.
ಈ ಟೂರ್ನಿಯಲ್ಲಿ ಉಭಯ ತಂಡಗಳು ಉತ್ತಮವಾಗಿ ಆಡುತ್ತಿವೆ.
ಆದರೆ, ಪಾಕಿಸ್ತಾನ ಒಂದೇ ಒಂದು ಪಂದ್ಯವನ್ನು ಸೋತಿಲ್ಲ ಹಾಗಾಗಿಯೇ ಅವರನ್ನು ಫೇವರಿಟ್ ಆಗಿ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ ಉತ್ತಪ್ಪ.
ಸೆಮೀಸ್ ನಲ್ಲಿ ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಟೂರ್ನಮೆಂಟ್ನಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನು ಸೋಲದ ಪಾಕಿಸ್ತಾನಕ್ಕೆ ಅನುಕೂಲಕರವಾಗಲಿದೆ ಎಂದು ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.
ಮತ್ತೊಂದೆಡೆ ಆಸ್ಟ್ರೇಲಿಯಾ ಕೂಡ ಈ ಟೂರ್ನಿಯಲ್ಲಿ ಅದ್ಭುತವಾಗಿ ಆಡುತ್ತಿದೆ.
ಆಸೀಸ್ ತಂಡವನ್ನೂ ಕೂಡ ಕಡೆಗಣಿಸುವಂತಿಲ್ಲ. ಯಾಕಂದ್ರೆ ಕಾಂಗರೂಗಳು ಐಸಿಸಿ ಟೂರ್ನಿಯಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.
ಆದರೆ ಟಿ20 ವಿಶ್ವಕಪ್ನಲ್ಲಿ ಒಮ್ಮೆಯೂ ಪ್ರಶಸ್ತಿ ಗೆಲ್ಲಲಿಲ್ಲ. ಈ ಟೂರ್ನಿಯಲ್ಲಿ ಆಸೀಸ್ ಆರಂಭಿಕರು ಉತ್ತಮ ಫಾರ್ಮ್ ನಲ್ಲಿದ್ದಾರೆ.
ಕಾಂಗರೂಗಳು ತಮ್ಮದೇ ದಿನದಲ್ಲಿ ಯಾವುದೇ ತಂಡವನ್ನು ಸೋಲಿಸಬಹುದು ಎಂದು ಉತ್ತಪ್ಪ ಹೇಳಿದ್ದಾರೆ .