Uttar Pradesh : ವಾರಣಾಸಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಿದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಪ್ರಮುಖ ನದಿಗಳಾದ ಗಂಗಾ ಯಮುನಾ ನದಿ ಪ್ರವಾಹದಿಂದಾಗಿ 1100 ಕ್ಕೂ ಹೆಚ್ಚು ಹಳ್ಳಿಗಳು ಮುಳುಗಡೆಯಾಗಿವೆ. ರಾಜ್ಯದಲ್ಲಿ ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿದ್ದರೂ ಹಲವು ಜಿಲ್ಲೆಗಳು ಪ್ರವಾಹದ ಪರಿಸ್ಥಿತಿ ಎದುರಿಸುತ್ತಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಗಾಜಿಪುರ ಮತ್ತು ವಾರಣಾಸಿ ಜಿಲ್ಲೆಗಳಲ್ಲಿ ಏರಿಯಲ್ ಸಮೀಕ್ಷೆ ನಡೆಸಿದರು. ಗಾಜಿಪುರ ಮತ್ತು ವಾರಣಾಸಿ ಜಿಲ್ಲೆಗಳಲ್ಲಿ ಪ್ರವಾಹ ಸಂತ್ರಸ್ತರನ್ನ ಭೇಟಿ ಮಾಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು. ರಾಜ್ಯದಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗಿದ್ದು, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಭಾರಿ ಮಳೆ ಮತ್ತು ರಾಜ್ಯದ ಪ್ರಮುಖ ನದಿಗಳಲ್ಲಿ ನೀರು ಬಿಡುಗಡೆಯಿಂದ ಈ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಡಬಲ್ ಇಂಜಿನ್ ಸರ್ಕಾರ ಜನರನ್ನು ರಕ್ಷಿಸಲು ಮತ್ತು ಪರಿಹಾರ ನೀಡಲು ಯಾವುದೇ ಪ್ರಯತ್ನಗಳನ್ನ ಬಿಡುವುದಿಲ್ಲ ಎಂದು ಪ್ರತಿಪಾದಿಸಿದ ಯೋಗಿ ಆದಿತ್ಯನಾಥ್, ಸರ್ಕಾರವು ಪ್ರವಾಹದಿಂದ ಜನರನ್ನು ರಕ್ಷಿಸುವ ಕೆಲಸ ಮಾತ್ರವಲ್ಲದೆ, ಕಡಿಮೆ ಮಳೆಯಿಂದ ಬಳಲುತ್ತಿರುವ ರೈತರಿಗೆ ಪರಿಹಾರ ನೀಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಎಣ್ಣೆಕಾಳುಗಳು ಮತ್ತು ಬೇಳೆಕಾಳುಗಳ ಉತ್ಪಾದನೆಯನ್ನು ಉತ್ತೇಜಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸುತ್ತಿದೆ ಮತ್ತು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತರಕಾರಿ ಬೀಜಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಕಡಿಮೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರೈತರಿಗೆ ‘ಟೋರಿಯಾ’ ಮತ್ತು ಸಾಸಿವೆ ಕಾಳುಗಳ ಮಿನಿಕಿಟ್‌ಗಳನ್ನು ಉಚಿತವಾಗಿ ವಿತರಿಸಲಿದೆ ಎಂದು ಅವರು ಹೇಳಿದರು








