ಕೋವಿಡ್ ಹೆಚ್ಚಳ ಹಿನ್ನಲೆ ಹರಿಯಾಣ, ಉತ್ತರ ಪ್ರದೇಶ ಹರಿಯಾಣದಲ್ಲಿ ಮಾಸ್ಕ್ ಕಡ್ಡಾಯ….

1 min read

ಕೋವಿಡ್ ಹೆಚ್ಚಳ ಹಿನ್ನಲೆ ಹರಿಯಾಣ, ಉತ್ತರ ಪ್ರದೇಶ ಹರಿಯಾಣದಲ್ಲಿ ಮಾಸ್ಕ್ ಕಡ್ಡಾಯ….

ರಾಜ್ಯದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಹರಿಯಾಣ ಸರ್ಕಾರ ಮತ್ತೊಮ್ಮೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕೆಲಸದ ಸ್ಥಳದಲ್ಲಿ ಪ್ರತಿ ವ್ಯಕ್ತಿಯೂ ಮುಖಕ್ಕೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದಾರೆ.

ಗುರುಗ್ರಾಮ್, ಫರಿದಾಬಾದ್, ಸೋನಿಪತ್ ಮತ್ತು ಜಜ್ಜರ್ ಜಿಲ್ಲೆಗಳಿಗೆ ಆದೇಶ ಹೊರಡಿಸಲಾಗಿದೆ. ರಾಜ್ಯದ ಈ ನಾಲ್ಕು ಜಿಲ್ಲೆಗಳಲ್ಲಿ ಮಾಸ್ಕ್ ಧರಿಸದ ಯಾರಿಗಾದರೂ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಅನಿಲ್ ವಿಜ್  ಹೇಳಿದರು.

ಏತನ್ಮಧ್ಯೆ, ಉತ್ತರ ಪ್ರದೇಶ ಸರ್ಕಾರವು ರಾಜ್ಯದ ಏಳು ಜಿಲ್ಲೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶಕ್ಕೆ ಸಮೀಪವಿರುವ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ನಿನ್ನೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಗೌತಮ್ ಬುಧ್ ನಗರ್, ಘಾಜಿಯಾಬಾದ್, ಹಾಪುರ್, ಮೀರತ್, ಬಾಗ್‌ಪತ್ ಮತ್ತು ಬುಲಂದ್‌ಶಹರ್ ಅನ್ನು ಒಳಗೊಂಡಿರುವ ಹತ್ತಿರವಿರುವ ಜಿಲ್ಲೆಗಳಲ್ಲಿ ಕೋವಿಡ್ ಪರಿಸ್ಥಿತಿಯ ಮೇಲೆ ನಿಗಾ ಇಡಲು ಅವರು ಅಧಿಕಾರಿಗಳಿಗೆ ಹೇಳಿದ್ದಾರೆ.

ಈ ಎಲ್ಲಾ 6 ಜಿಲ್ಲೆಗಳು ಮತ್ತು ರಾಜ್ಯ ರಾಜಧಾನಿ ಲಕ್ನೋದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd