ಇಂದು ಉತ್ತರ ಪ್ರದೇಶ, ಪಂಜಾಬ್ ಚುನಾವಣೆ Saaksha Tv
ಉತ್ತರ ಪ್ರದೇಶ: ಇಂದು ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ.
59 ವಿಧಾಸಭಾ ಕ್ಷೇತ್ರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಒಟ್ಟು 627 ಅಭ್ಯರ್ಥಿಗಳು ಕಣದಲ್ಲಿದ್ದಾರೆ, ಇದರಲ್ಲಿ 2.15 ಕೋಟಿ ಜನರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಈ ಹಂತದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮೈನ್ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಕೇಂದ್ರ ಸಚಿವ ಎಸ್ ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ.
ಈ ಹಂತದಲ್ಲಿ ಚುನಾವಣೆ ನಡೆಯಲಿರುವ ಜಿಲ್ಲೆಗಳು ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್ಪುರಿ, ಫರೂಕಾಬಾದ್, ಕಾನ್ಪುರ್, ದೇಹತ್, ಕಾನ್ಪುರ್ ನಗರ, ಕನೌಜ್, ಇಟಾವಾ, ಔರೈಯಾ, ಲಲಿತ್ಪುರ, ಹಮೀರ್ಪುರ್, ಜಲೌನ್, ಝಾನ್ಸಿ ಮತ್ತು ಮಹೋಬಾ. ಇಲ್ಲಿ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.
ಪಂಜಾಬ್ ಚುನಾವಣೆ
ಇಂದು ಪಂಜಾಬ್ ಚುನಾವಣೆ ನಡೆಯಲಿದ್ದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6ರವರೆಗೆ ನಡೆಯಲಿದೆ.
ಪಂಜಾಬ್ ನಲ್ಲಿ 117 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್, ಎಎಪಿ, ಎಸ್ಎಡಿ-ಬಿಎಸ್ಪಿ ಮೈತ್ರಿಕೂಟ, ಬಿಜೆಪಿ-ಪಿಎಲ್ಸಿ-ಎಸ್ಎಡಿ (ಸಂಯುಕ್ತ) ಮತ್ತು ಸಂಯುಕ್ತ ಸಮಾಜ ಮೋರ್ಚಾ ಕಣದಲ್ಲಿವೆ. 93 ಮಹಿಳೆಯರು ಸೇರಿದಂತೆ 1,304 ಅಭ್ಯರ್ಥಿಗಳ ಭವಿಷ್ಯವನ್ನು 2.14 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.
ಪಂಜಾಬ್ನಲ್ಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಭಗವಂತ್ ಮಾನ್, ಮಾಜಿ ಸಿಎಂಗಳಾದ ಅಮರಿಂದರ್ ಸಿಂಗ್ ಮತ್ತು ಪ್ರಕಾಶ್ ಸಿಂಗ್ ಬಾದಲ್ ಮತ್ತು ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಸ್ಪರ್ಧಿಸುತ್ತಿರುವ ಪ್ರಮುಖರು.
ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಹಾಗೂ ಮಣಿಪುರ ಸೇರಿ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶವು ಮಾರ್ಚ್ 10 ರಂದು ಹೊರಬೀಳಲಿದೆ.