ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಇಲ್ಲ : ಬಿಜೆಪಿ
ನವದೆಹಲಿ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದೆ. ಗೆಲ್ಲುವ ಕುದುರೆಗಳಿಗಾಗಿ ಬಿಜೆಪಿ – ಸಮಾಜವಾದಿ ಪಾರ್ಟಿ ಗಾಳ ಹಾಕುತ್ತಿವೆ.
ಇದರ ಭಾಗವಂತೆ ಬಿಜೆಪಿ ಸಚಿವರು, ಶಾಸಕರು ಎಸ್ ಪಿ ಕಡೆ ವಾಲುತ್ತಿದ್ದರೇ, ಎಸ್ ಪಿಯಲ್ಲಿದ್ದ ನಾಯಕರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಈ ಎರಡೂ ಪಕ್ಷಗಳ ಮಧ್ಯೆ ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ.
ಇದೀಗ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಚರ್ಚೆಗೆ ಬಂದಿದೆ.
ಇದೇ ವಿಚಾರವಾಗಿ ಮಾತನಾಡುತ್ತಾ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ತಾವೇ ಸಿಎಂ ಅಭ್ಯರ್ಥಿ ಎಂಬಂತೆ ಹೇಳಿಕೊಂಡಿದ್ದರು.
ಇದಕ್ಕೆ ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಸ್ಪರ್ಧಿಸಲು ಅಭ್ಯರ್ಥಿಗಳೇ ಸಿಗುತ್ತಿಲ್ಲ.
ಆದರೆ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕಾ ವಾದ್ರಾ ಅವರು ತಮ್ಮನ್ನು ತಾವೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಾರೆ.
ಅಂದ ಹಾಗೆ ಕಾಂಗ್ರೆಸ್ ಪಕ್ಷದಲ್ಲಿ ಈ ಹಿಂದೆ ಇದ್ದ ಕಾರ್ಯಕಾರಿಣಿ ಸಮಿತಿ ಅಸ್ತಿತ್ವದಲ್ಲಿದೆಯೇ ಎಂದು ಕುಟುಕಿದೆ.