Uttar Pradesh – ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್
ಉತ್ತರಪ್ರದೇಶದಲ್ಲಿ 18ನೇ ವಿಧಾನಸಭೆಯ ಅಧಿವೇಶನಕ್ಕೆ ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಆರಂಭವಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊದಲು ಸಭಾನಾಯಕರಾಗಿ ಪ್ರಮಾಣ ವಚನ ಬೋಧಿಸಿದರು. ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ರಮಾಪತಿ ಶಾಸ್ತ್ರಿ ಪ್ರಮಾಣ ವಚನ ಬೋಧಿಸಿದರು. ನಾಳೆಯೂ ಬೆಳಗ್ಗೆ 11 ಗಂಟೆಯಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ನಾಳೆ ಮಧ್ಯಾಹ್ನ ವಿಧಾನಸಭಾ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ.
ಸಮಾರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೂತನವಾಗಿ ಆಯ್ಕೆಯಾದ ಶಾಸಕರನ್ನು ಅಭಿನಂದಿಸಿ ಶುಭ ಹಾರೈಸಿದರು. ಸಿಎಂ ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದರು.
Uttar Pradesh – CM Yogi Adityanath takes oaths as MLA in Legislative Assembly