ಉತ್ತರ ಪ್ರದೇಶ ಚುನಾವಣೆ : ಪ್ರಿಯಾಂಕಾ ಗಾಂಧಿ ವಾದ್ರಾ ಸಿಎಂ ಅಭ್ಯರ್ಥಿ..?
ನವದೆಹಲಿ : ಮುಂದಿನ ವರ್ಷದ ಆರಂಭದಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿದೆ.
ಸದ್ಯ ಆಡಳಿತದ ಚುಕ್ಕಾಣಿ ಹಿಡಿರುವ ಬಿಜೆಪಿ, ಮುಂದಿನ ಬಾರಿಯೂ ಮ್ಯಾಜಿಕ್ ಮಾಡಲು ಸಜ್ಜಾಗಿದೆ.
ಈ ಮಧ್ಯೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ.
ಮುಂದಿನ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ನಾವು ಚುನಾವಣೆಯನ್ನು ಎದುರಿಸುತ್ತೇವೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಅಲ್ಲದೆ ಪ್ರಿಯಾಂಕಾ ಗಾಂಧಿ ಅವರು ನಮ್ಮ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಆಕೆಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆಗಳೂ ಇವೆ. ಆದರೂ ಈ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಖುರ್ಷಿದ್ ತಿಳಿಸಿದ್ದಾರೆ.