ಕಾಂಗ್ರೆಸ್ ಗೆ ‘ಕೈ’ ಕೊಟ್ಟ ಆರ್ ಪಿಎನ್ ಸಿಂಗ್
ಲಕ್ನೋ : ಉತ್ತರ ಪ್ರದೇಶ ಚುನಾವಣೆ ಹತ್ತಿರವಾಗುತ್ತಿದ್ದಂತೆ,ರಾಜೀನಾಮೆ ಆರಂಭವಾಗಿದೆ. ಒಂದು ಪಕ್ಷದವರು ಇನ್ನೊಂದು ಪಕ್ಷಕ್ಕೆ ಹಾರೋದು ಸಾಮಾನ್ಯವಾಗಿ ಬಿಟ್ಟಿದೆ.
ಅದರಂತೆ ಇದೀಗ ಕಾಂಗ್ರೆಸ್ ನ ಮಾಜಿ ಸಂಸದ ಹಾಗೂ ಹಿರಿಯ ನಾಯಕ ಆರ್ ಪಿ ಎನ್ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಟ್ವಿಟ್ಟರ್ ನಲ್ಲಿ ರಾಜೀನಾಮೆ ಪತ್ರವನ್ನು ಹಂಚಿಕೊಂಡಿರುವ ಸಿಂಗ್, ಶೀಘ್ರದಲ್ಲಿಯೇ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಉತ್ತರ ಪ್ರದೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನ ಮುಂದಾಳತ್ವ ವಹಿಸಿಕೊಂಡಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಿಯಾಂಕಾ ಪ್ರಯತ್ನಿಸುತ್ತಿದ್ದು, ಇದೀಗ ಆರ್ ಪಿ ಎನ್ ಸಿಂಗ್ ಪಕ್ಷ ತೊರೆದಿರುವುದು ಕಾಂಗ್ರೆಸ್ ಗೆ ಹಿನ್ನಡೆಯಾಗಲಿದೆ.
ಅಂದಹಾಗೆ ಆರ್‌ಪಿಎನ್ ಸಿಂಗ್ ಅವರು 1996 ಮತ್ತು 2009ರ ನಡುವೆ ಉತ್ತರ ಪ್ರದೇಶದ ಪದ್ರೌನಾ ಕ್ಷೇತ್ರದಿಂದ ಸಂಸದರಾಗಿ ಸಚಿವರಾಗಿದ್ದರು. ಆ ಬಳಿಕ ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.