ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ವಿಚಾರವಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ‘ಮತ್ತೊಮ್ಮೆ ಭಾರತದ ಮಗಳು ಭೀಕರವಾಗಿ ಹಿಂಸೆಗೊಳಗಾಗಿದ್ದಾಳೆ’ ಎಂದು ಕಿಡಿಕಾರಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಯುವರಾಜ್, ಮತ್ತೊಮ್ಮೆ ಭಾರತದ ಮಗಳು ಭೀಕರವಾಗಿ ಹಿಂಸೆಗೊಳಗಾಗಿದ್ದಾಳೆ.
ಹತ್ರಾ ಸ್ ಅತ್ಯಾಚಾರ ಘಟನೆಯ ಬಗ್ಗೆ ಹೇಳಲಾಗದಷ್ಟು ಕೋಪ ಮತ್ತು ದುಃಖವಾಗುತ್ತಿದೆ.
ಈ ಘೋರ ಅಪರಾಧದಿಂದ ತಮ್ಮ ಪ್ರೀತಿಯ ಮಗಳನ್ನು ಕಳೆದುಕೊಂಡ ಕುಟುಂಬದೊಂದಿಗೆ ನಾನು ನಿಲ್ಲುತ್ತೇನೆ.
ಈ ಅಮಾನವೀಯ ಘಟನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ : ಸಂತ್ರಸ್ತೆ ಕುಟುಂಬವನ್ನು ಹೊರಗಿಟ್ಟು : ಪೊಲೀಸರಿಂದಲೇ ಯುಪಿಯ ‘ನಿರ್ಭಯಾ’ ಅಂತ್ಯಸಂಸ್ಕಾರ
ಸೆಪ್ಟೆಂಬರ್ 14ರಂದು ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಯುವತಿ ತನ್ನ ತಾಯಿಯೊಂದಿಗೆ ಹುಲ್ಲು ತರಲು ಹೋಗಿದ್ದಳು.
ಈ ವೇಳೆ ನಾಲ್ವರು ಕಾಮುಕರು ಆಕೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಅಲ್ಲದೆ ಆಕೆಯ ನಾಲಿಗೆ ಕತ್ತರಿಸಿ, ಬೆನ್ನುಮೂಳೆ ಹಾಗೂ ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು.
ಘಟನೆಯಿಂದ ತೀವ್ರ ಅಸ್ವಸ್ಥಳಾಗಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದಜರ್ಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯಿಸಿರೆಳೆದಿದ್ದಳು. ಇಂದು ಪೊಲೀಸರೇ ಯುವತಿಯ ಅಂತ್ಯಕ್ರಿಯೆ ನೆರವೇರಿಸಿದರು.