Uttarapradesha – ಉಚಿತ ಪಡಿತರ ಮುಂದಿನ 3 ತಿಂಗಳು ವಿಸ್ತರಿಸಿದ ಸಿ ಎಂ ಯೋಗಿ
ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಇಂದು ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೊದಲ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.
ಉಚಿತ ಪಡಿತರ ಯೋಜನೆಯಿಂದ ರಾಜ್ಯದ 15 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಆದಿತ್ಯನಾಥ್ ಹೇಳಿದರು. ಇದಕ್ಕಾಗಿ ಸರ್ಕಾರ ಸುಮಾರು 3,270 ಕೋಟಿಯನ್ನ ಖರ್ಚುಮಾಡಲಿದೆ.
ಈ ಯೋಜನೆಯನ್ನು ಕರೋನಾ ಅವಧಿಯಲ್ಲಿ ಪ್ರಾರಂಭಿಸಲಾಯಿತು ಮತ್ತು ರಾಜ್ಯದ ಬಡ ಮತ್ತು ದೀನದಲಿತ ಜನರಿಗೆ ದೊಡ್ಡ ಪರಿಹಾರವನ್ನು ನೀಡಿತು.
ಮತ್ತೊಂದು ಬೆಳವಣಿಗೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಮತ್ತು ಗೊಂಡಾದ ಮಂಕಾಪುರದ ಶಾಸಕ ರಮಾಪತಿ ಶಾಸ್ತ್ರಿ ಅವರು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಪ್ರಮಾಣ ವಚನ ಬೋಧಿಸಿದರು.