ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ಯುಪಿ ಮಾದರಿ ಅಲ್ಲ : ಸಿದ್ದರಾಮಯ್ಯ
ಬೆಂಗಳೂರು : ಕರ್ನಾಟಕಕ್ಕೆ ಗೂಂಡಾರಾಜ್ಯ ಎಂಬ ಕುಖ್ಯಾತಿಯ ಉತ್ತರಪ್ರದೇಶ ಎಂದಿಗೂ ಮಾದರಿ ಅಲ್ಲ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಲವ್ ಜಿಹಾದ್ ತಡೆಗೆ ಕಾನೂನು ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿ, ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಬಿ.ಎಸ್.ಯಡಿಯೂರಪ್ಪ ಅವರ ಘೋಷಣೆ,
ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದು ಟೀಕಿಸಿದ್ದಾರೆ.
‘ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಬಿಜೆಪಿ ಸರ್ಕಾರ ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ?
ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ.
ಈ ಬಾರಿ ನನಗೆ ಮಂತ್ರಿಸ್ಥಾನ ಖಚಿತ : ಆರ್.ಶಂಕರ್
‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ.
ಮುಖ್ಯಮಂತ್ರಿ ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ.
ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದು ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.
ಸಿದ್ದು ಭ್ರಮೆಯಲ್ಲಿದ್ದರೆ, ಸಿಎಂ ಬಿಎಸ್ವೈ ಬದಲಾವಣೆ ಇಲ್ಲ: ರಮೇಶ್ ಜಾರಕಿಹೊಳಿ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel