ಉತ್ತರಪ್ರದೇಶ | ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ : 7 ಮಂದಿ ಸಾವು
ಲಕ್ನೋ : ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಥುರಾದ ನೌಜೀಲ್ ನ ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಆಗ್ರಾ ಕಡೆಗೆ ಚಲಿಸುತ್ತಿದ್ದ ಆಯಿಲ್ ಟ್ಯಾಂಕರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಈ ವೇಳೆ ಮಧ್ಯೆದಲ್ಲಿ ಬಂದ ಕಾರಿಗೂ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರೂ ಸೇರಿ ಏಳು ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ : ಸ್ಥಿತಿ ಗಂಭೀರ
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಕಾರಿನಲ್ಲಿದ್ದ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
