ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ರಾಜೀನಾಮೆ ನೀಡಿದ ತೀರ್ಥ್ ಸಿಂಗ್ – ಉತ್ತರಾಖಂಡ್ ಮುಂದಿನ ಸಿಎಂ ಯಾರು..?
ನವದೆಹಲಿ : ಕಳೆದ 4 ತಿಂಗಳ ಹಿಂದೆಯಷ್ಟೇ ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಸಿಎಂ ತೀರ್ಥ್ ಸಿಂಗ್ ಧೀಡೀರನೆ ರಾಜೀನಾಮೆ ನೀಡಿದ್ದಾರೆ.. ಅಧಿಕಾರ ವಹಿಸಿಕೊಂಡಾಗಿನಿಂದಲೂ ತೀರ್ಥ್ ಸಿಂಗ್ ಕೇವಲ ವಿವಾದಾತ್ಮಕ ಹೇಳಿಕೆಗಳನ್ನ ನೀಡುತ್ತಲೇ ಸುದ್ದಿಯಲ್ಲಿದ್ರು..
115 ದಿನಗಳ ಆಡಳಿತದ ಬಳಿಕ ಹೈಕಮಾಂಡ್ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದಾರೆ. ಇದೀಗ ಉತ್ತರಾಖಂಡ ಮುಂದಿನ ಸಿಎಂ ಯಾರು ಅನ್ನೋ ಲೆಕ್ಕಾಚಾರಗಳು ನಡೆಯುತ್ತಿವೆ.
ಇನ್ನೂ ಸಿಎಂ ರೇಸ್ ನಲ್ಲಿ ಘಟಾನುಘಟಿಗಳಿದ್ದಾರೆ.. ಮಾಜಿ ರಾಜ್ಯಧ್ಯಕ್ಷ ಬನ್ಶಿಧರ್ ಭಗತ್, ನೀರಾವರಿ ಸಚಿವ ಸತ್ಪಾಲ್ ಮಹಾರಾಜ್, ಉನ್ನತ ಶಿಕ್ಷಣ ಸಚಿವರಾಗಿರುವ ಧನ್ ಸಿಂಗ್ ರಾವತ್, ಮತ್ತು ಅರಣ್ಯ ಸಚಿವ ಹರಕ್ ಸಿಂಗ್ ರಾವತ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ..
2013ರ ಪ್ರವಾಹದ ಬಳಿಕ ಕೇದಾರನಾಥ್ ಮರು ನಿರ್ಮಾಣಕ್ಕೆ ಸಹಾಯ ಮಾಡಿದ ನಿವೃತ್ತ ಕರ್ನಲ್ ಅಜಯ್ ಕೋತಿಯಾಲ್ ಗೆ ಆಮ್ ಅದ್ಮಿ ಪಕ್ಷದಿಂದ ಉಪ ಚುನಾವಣೆಗೆ ಟಿಕೆಟ್ ಘೋಷಣೆ ಬಳಿಕ ಬಿಜೆಪಿ ಹೈಕಮಾಂಡ್ ಇಂತದೊಂದು ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ತೀರ್ಥ್ ಸಿಂಗ್ ರಾವತ್, ಪೌರಿ ಲೋಕಸಭೆ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಮಾರ್ಚ್ 10 ರಂದು ಅವರು ಸಿಎಂ ಆಗಿ ಪ್ರಮಾಣ ವಚನ ಪಡೆದುಕೊಂಡಿದ್ದರು. ಹಾಲಿ ಸಂಸದರಾಗಿರುವ ಕಾರಣ ಅವರು ಸೆಪ್ಟೆಂಬರ್ 10 ರೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿತ್ತು.
ಸದ್ಯ ಗಂಗೋತ್ರಿ ಮತ್ತು ಹಲ್ದ್ವಾನಿ ಕ್ಷೇತ್ರಗಳು ಖಾಲಿ ಇದ್ದು ಈ ಎರಡು ಕ್ಷೇತ್ರಗಳ ಪೈಕಿ ಒಂದರಿಂದ ತೀರ್ಥ್ ಸಿಂಗ್ ರಾವತ್ ಆಯ್ಕೆಯಾಗಬೇಕಿತ್ತು. ಆದರೆ ಕೊರೊನಾ ಕಾರಣಗಳಿಂದ ಸದ್ಯ ಕೇಂದ್ರ ಚುನಾವಣಾ ಆಯೋಗ ಈ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಸುವುದು ಅನುಮಾನ ಎನ್ನಲಾಗಿದ್ದು, ಈ ಕಾರಣಗಳಿಂದ ರಾಜೀನಾಮೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಉತ್ತರಾಖಂಡ್ ಸಿಎಂ ತಿರಥ್ ಸಿಂಗ್ ರಾವತ್ ರಾಜೀನಾಮೆ