ಉತ್ತರಾಖಂಡ ಹಿಮಕುಸಿತ: ಸುರಕ್ಷತೆಗೆ ಬಾಲಿವುಡ್ ತಾರೆಯರ ಪ್ರಾರ್ಥನೆ..!
ಉತ್ತರಾಖಂಡದಲ್ಲಿ ಹಿಮಸ್ಫೋಟದಲ್ಲಿ ಈಗಾಗಲೇ 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, 19ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿದೆ. ಈ ಪ್ರಕರಣಕ್ಕೆ ಇಡೀ ದೇಶದ ಜನರೆ ಬೆಚ್ಚಿಬಿದ್ದಿದ್ದು, ಅಲ್ಲಿನ ಸ್ಥಿತಿಗತಿಗೆ ಮರುಕವ್ಯಕ್ತಪಡಿಸುತ್ತಿದ್ದಾರೆ. ಚಮೋಲಿ ಜಿಲ್ಲಿಯ ಜೋಶಿಮಠದಲ್ಲಿ ಸಂಭವಿಸಿದ ಹಿಮನದಿ ಸ್ಫೋಟದಲ್ಲಿ ಸಿಲುಕಿ ಬಳಲುತ್ತಿರುವವರಿಗೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಮತ್ತು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅನೇಕರು ವಿಪತ್ತು ನಿರ್ವಹಣಾ ಅಧಿಕಾರಿಗಳ ಸಂಪರ್ಕ ಸಂಖ್ಯೆ ಮತ್ತು ಇತರ ಸಹಾಯವಾಣಿ ಸಂಖ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಅಭಿಮಾನಿಗಳ ‘ದಾಸ’ನ ‘ಮೆಜೆಸ್ಟಿಕ್’ ತೆರೆಕಂಡು 19 ವರ್ಷ..!
ಇತ್ತ ಬಾಲಿವುಡ್ ನಟರೂ ಸಹ ಈ ಪ್ರಕರಣದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ಅಲ್ಲಿನ ಜನರ ಸುರಕ್ಷತೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ನಟಿ ಕರೀನಾ ಕಪೂರ್ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಉತ್ತರಾಖಂಡದಲ್ಲಿ ಭೀಕರ ದುರಂತದಿಂದ ಬಳಲುತ್ತಿರುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನನ್ನ ಪ್ರಾರ್ಥನೆ ಎಂದು ಹೇಳಿದ್ದಾರೆ. ಅದ್ರಂತೆ ಅಜಯ್ ದೇವಗನ್, ಅಕ್ಷಯ್ ಕುಮಾರ್, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್, ತಮನ್ನಾ ಭಾಟಿಯಾ ಸೇರಿದಂತೆ ಅನೇಕರು ಟ್ವೀಟ್ ಮಾಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಬಿಗ್ ಬಾಸ್ ಕನ್ನಡ – 8 : ಯಾವಾಗಿನಿಂದ ಆರಂಭದ : ಡೇಟ್ ಫಿಕ್ಸ್..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel