ಬಸ್ಸಿಗೆ ಜೆಸಿಬಿ ಡಿಕ್ಕಿ : 17 ಮಂದಿ ಸಾವು – ಕೇಂದ್ರ, ಯುಪಿ ಸರ್ಕಾರದಿಂದ ಪರಿಹಾರ ಘೋಷಣೆ

1 min read

ಬಸ್ಸಿಗೆ ಜೆಸಿಬಿ ಡಿಕ್ಕಿ : 17 ಮಂದಿ ಸಾವು – ಕೇಂದ್ರ, ಯುಪಿ ಸರ್ಕಾರದಿಂದ ಪರಿಹಾರ ಘೋಷಣೆ

ಉತ್ತರಪ್ರದೇಶ : ಬಸ್ಸಿಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ  17 ಮಂದಿ ಮೃತಪಟ್ಟಿರುವ ಘಟನೆ  ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.  ಈ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ. ಕಾನ್ಪುರದ ಸಚೇಂದಿ ಬಳಿಯ ಕಿಸಾನ್ ನಗರ ಕಾಲುವೆ ಸಮೀಪ ಜೆಸಿಬಿ ಶತಾಬ್ದಿ ಎಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡರವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಬಸ್ಸಿನಲ್ಲಿದ್ದ  ಪ್ರಯಾಣಿಕರು ಕಾನ್ಪುರದಿಂದ ಅಹಮದಾಬಾದ್ ಕಡೆ ಚಲಿಸುತ್ತಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ಮೃತರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd