ಇಂಡೋ – ಪಾಕ್ ಮ್ಯಾಚ್ : ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ
ಟೀಮ್ ಇಂಡಿಯಾ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಹೀನಾಯವಾಗಿ ಕಳೆದುಕೊಂಡ ಬಳಿಕ ಅಭಿಮಾನಿಗಳು ಕಂಗಾಲಾಗಿದ್ದಾರೆ. ಇತ್ತ ಕೆಲವೆಡೆ ಘರ್ಷಣೆಗಳು ಕೂಡ ನಡೆದಿವೆ. ಹೌದು ಟಿ–20 ವಿಶ್ವಕಪ್ ಪಂದ್ಯಾವಳಿಯ ನಂತರ ಪಂಜಾಬ್ ನ ಸಂಗ್ರೂರ್ ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜಿನ ಕೆಲವು ಕಾಶ್ಮೀರಿ ವಿದ್ಯಾರ್ಥಿಗಳು ಮತ್ತು ಉತ್ತರ ಪ್ರದೇಶ, ಬಿಹಾರ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಭಾನುವಾರ ರಾತ್ರಿಯ ಪಂದ್ಯದ ನಂತರ ಕೆಲವು ಘೋಷಣೆಗಳು ಕೇಳಿದ್ದವು. ನಂತರದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾಯಿ ಗುರುದಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಕೆಲವು ಕಾಶ್ಮೀರಿ, ಉತ್ತರ ಪ್ರದೇಶ ಮತ್ತು ಬಿಹಾರದ ವಿದ್ಯಾರ್ಥಿಗಳು ತಮ್ಮ ಕೊಠಡಿಗಳಲ್ಲಿ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿತು. ನಂತರದಲ್ಲಿ ವಿದ್ಯಾರ್ಥಿಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಉತ್ತರ ಪ್ರದೇಶದ ಕೆಲವು ವಿದ್ಯಾರ್ಥಿಗಳು ತಮ್ಮ ಕೊಠಡಿಗೆ ನುಗ್ಗಿದ್ದಾರೆ ಎಂದು ಕಾಶ್ಮೀರಿ ವಿದ್ಯಾರ್ಥಿಯೊಬ್ಬ ಆರೋಪಿಸಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ರೋಹಿತ್ ಅವರನ್ನು ಹೊರಗಿಡುತ್ತೀರಾ? ಅಚ್ಚರಿ ವ್ಯಕ್ತಪಡಿಸಿದ ವಿರಾಟ್
ಪಾಕ್ ವಿರುದ್ಧ ಸೋತ ಟೀಮ್ ಇಂಡಿಯಾ ಫೈನಲ್ ಲೆಕ್ಕಾಚಾರ ಹೇಗೆ..? ಇನ್ನೊಂದು ಮ್ಯಾಚ್ ಸೋತ್ರೂ ಕಪ್ ಆಸೆಗೆ ತಣ್ಣೀರು..?