ಲಾಕ್ ಡೌನ್ ನಿಯಮ ಉಲ್ಲಂಘನೆ – ಪೊಲೀಸರಿಂದ ಥಳಿತಕ್ಕೆ ಒಳಗಾಗಿ 17 ವರ್ಷದ ಬಾಲಕ ಸಾವು..!
ಉತ್ತರ ಪ್ರದೇಶ : ಕೊರೋನಾ ನಿಯಂತ್ರಣಕ್ಕೆ ಹೇರಲಾಗಿರುವ ಲಾಕ್ ಡೌನಮ್ ನಿಯಮ ಉಲ್ಲಂಘಿಸಿದ್ದಕ್ಕಾಗಿ 17 ವರ್ಷದ ಬಾಲಕನನ್ನು ತೀವ್ರವಾಗಿ ಪೊಲೀಸರು ಥಳಿಸಿದ್ದರು. ಹೀಗೆ ಥಳಿಕತಕ್ಕೆ ಒಳಗಾದ ಬಾಲಕ ಸಾವನ್ನಪ್ಪಿದ್ದಾನೆ. ಪೊಲೀಸರ ವಿರುದ್ಧ ಕುಟುಂಬಸ್ಥರು, ಸಾವರ್ಜನಿಕರು ನೆಟ್ಟಿಗಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಗಾರ್ ಮೌ ನ ಭಟ್‌ಪುರಿ ಪ್ರದೇಶದಲ್ಲಿ ಬಾಲಕ ತನ್ನ ಮನೆಯ ಹೊರಗೆ ತರಕಾರಿ ಮಾರುತ್ತಿದ್ದಾಗ ಈ ಘಟನೆ ನಡೆದಿದ್ದು, ಪೊಲೀಸರ ತುಳಿತದಿಂದಾಗಿ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ಪ್ರಕರಣ ಸಂಬಂಧ ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ ಮತ್ತು ಹೋಮ್‌ಗಾರ್ಡ್ ಜವಾನ್ ಅವರನ್ನು ವಜಾ ಮಾಡಲಾಗಿದೆ.
ಪೊಲೀಸ್ ಕ್ರಮದಿಂದ ಆಕ್ರೋಶಗೊಂಡ ಸ್ಥಳೀಯರು ಲಕ್ನೋ ರಸ್ತೆ ಕ್ರಾಸಿಂಗ್‌ನಲ್ಲಿ ಜಾಮ್ ಸೃಷ್ಟಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಸರ್ಕಾರಿ ಕೆಲಸ ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಅವರ ಒತ್ತಾಯಕ್ಕೆ ಮಣಿದ ಪೋಲಿಸ್ ಮೇಲಾಧಿಕಾರಿಗಳು, ಭಾಗಿಯಾಗಿರುವ ಪೊಲೀಸರ ವಿರುದ್ಧ FIR ದಾಖಲಿಸಲಾಗುವುದು ಮತ್ತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.