ಉತ್ತರಪ್ರದೇಶ: ಹತ್ರಾಸ್ ಪ್ರಕರಣದ ಕಿಚ್ಚು ಇನ್ನೂ ಇರುವಾಗಲೇ ಉತ್ತರಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ.
ದೇಶಾದ್ಯಂತ ಹತ್ರಾಸ್ ನಲ್ಲಿ ಅತ್ಯಾಚಾರಕ್ಕೀಡಾಗಿದ್ದ ಯುವತಿ ಸಾವಿನ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತೆದೆ.
ಇದರ ನಡುವೆಯೇ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕ ಪಿಶಾಚಿಗಳು ಪೈಶಾಚಿಕ ಕೃತ್ಯವೆಸಗಿರುವ ಮತ್ತೊಂದು ಪ್ರಕರಣ ವರದಿಯಾಗಿದೆ.
ಉತ್ತರಪ್ರದೇಶದಲ್ಲಿ ಮತ್ತೊಂದು ನೀಚ ಕೃತ್ಯ: 22 ವರ್ಷದ ಯುವತಿ ಮೇಲೆ ಅತ್ಯಾಚಾರ, ಯುವತಿ ಸಾವು
14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯವನೇ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಕಾಕೊರೆಯಲ್ಲಿ ನಡೆದಿದೆ.
ಸಂತ್ರಸ್ತೆ ತಂದೆಯ ದೂರಿನ ಮೇರೆಗೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.








