ಉತ್ತರಕೊಡಿ ಬಿಎಸ್ವೈ, ಪರಿಹಾರ ಕೇಳಲೂ ನಿಮಗೆ ಭಯನಾ : ಸಿದ್ದರಾಮಯ್ಯ
ಬೆಂಗಳೂರು : ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.
ರಾಜ್ಯದ 12 ಜಿಲ್ಲೆಗಳಲ್ಲಿ ಇತ್ತೀಚೆಗೆ ಪ್ರವಾಹದಿಂದಾಗಿ ಸಾಕಷ್ಟು ಹಾನಿ ಆಗಿದೆ. ಎಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದ್ರೆ ವರ್ಷದ ಹಿಂದೆ ಆಗಸ್ಟ್ ತಿಂಗಳಲ್ಲೇ ರಾಜ್ಯದ 22 ಜಿಲ್ಲೆಗಳಲ್ಲಿ ಅತಿವೃದ್ಧಿಯಾಗಿತ್ತು.
ಆಗ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರ ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ. ರಸ್ತೆ, ಸೇತುವೆ ಕಾಮಗಾರಿಗಳೂ ಕೂಡ ಅರ್ಧದಲ್ಲಿ ನಿಂತಿವೆ.
ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಉತ್ತರಕೊಡಿ ಬಿಎಸ್ ವೈ ಹ್ಯಾಷ್ ಟ್ಯಾಗ್ ನೊಂದಿಗೆ ಟ್ವೀಟ್ ಗಳನ್ನು ಮಾಡಿದ್ದು, ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ?
ಇದನ್ನೂ ಓದಿ : ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ : ಬಿ.ಸಿ.ಪಾಟೀಲ್
ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000, ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಸರ್ಕಾರ ಪರಿಹಾರ ನೀಡುವುದು ಯಾವಾಗ?
ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ.
ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ರೂ.35,000 ಕೋಟಿ, ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ?
ಇದನ್ನೂ ಓದಿ : ತಮಿಳುನಾಡಲ್ಲಿ `ಬಿಜೆಪಿ ಬಲ ಹೆಚ್ಚಿಸುತ್ತಾರಾ ತಲೈವಾ’..?
ಆಗಸ್ಟ್‍ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ ಎಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel