ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಣಾ ಪತ್ರ ವಿತರಣೆ V somanna saaksha tv
ಬೆಂಗಳೂರು: ಕಳೆದ ಅಕ್ಟೋಬರ್ ನಲ್ಲಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆಲವು ಮನೆಗಳಿಗೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿದ್ದವು. ಈ ಸಂಬಂಧ ಸಂತ್ರಸ್ತರಿಗೆ ಪರಿಹಾರಾರ್ಥವಾಗಿ ಮಂಜೂರಾದ 10 ಸಾವಿರ ರೂ.ಗಳ ಘೋಷಣಾ ಪತ್ರವನ್ನು ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ.ಸೋಮಣ್ಣ ಅವರು ವಿತರಿಸಿದರು.
ಘೋಷಣಾ ಪತ್ರಗಳನ್ನು ವಿತರಿಸಿ ಮಾತನಾಡಿದ ಸಚಿವರು, ಕ್ಷೇತ್ರದ ನಾಗರಿಕರ ರೇಷನ್ ಕಾರ್ಡ್, ಲೇಬರ್ ಕಾರ್ಡ್, ಆಧಾರ್ ಕಾರ್ಡ್, ಪಿಂಚಣಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳು ಮುಂದಿನ ವಾರದಿಂದಲೇ ನಿಮ್ಮ ಮನೆ ಬಾಗಿಲಗೆ ಬರಲಿದ್ದಾರೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.









