ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

V Somanna – ಗೋವಿಂದರಾಜನಗರ ಕ್ಷೇತ್ರದಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ

Mahesh M Dhandu by Mahesh M Dhandu
November 5, 2022
in Newsbeat, State, ಬೆಂಗಳೂರು
V Somanna

V Somanna

Share on FacebookShare on TwitterShare on WhatsappShare on Telegram

V Somanna – ಗೋವಿಂದರಾಜನಗರ ಕ್ಷೇತ್ರದಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣದ ಪ್ರಯುಕ್ತ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದಡಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿಂದು ಸಚಿವ ವಿ.ಸೋಮಣ್ಣ ರವರು ಕಳಸಪೂಜೆ ನೆರವೇರಿಸಿ ರಥಯಾತ್ರೆ ಅಭಿಯಾನಕ್ಕೆ ಚಾಲನೆ ನೀಡಿದರು.

Related posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

June 28, 2026
ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

June 28, 2026

ಪುಣ್ಯಪುರುಷನ ಇತಿಹಾಸವನ್ನು ವಿಶ್ವಕ್ಕೆ ಪರಿಚಯಿಸುವ ಮಹತ್ ಕಾರ್ಯ

ಈ‌ ವೇಳೆ ಮಾತನಾಡಿದ ಸಚಿವರು ಐತಿಹಾಸಿಕ ಹಿನ್ನೆಲೆಯುಳ್ಳ ಪುಣ್ಯಪುರುಷನ ಇತಿಹಾಸವನ್ನು ರಾಷ್ಟ್ರಕ್ಕೆ, ವಿಶ್ವಕ್ಕೆ ಪರಿಚಯಿಸುವಂತಹ ಉತ್ತಮ ತೀರ್ಮಾನವನ್ನು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಕೈಗೊಂಡಿದ್ದಾರೆ. ನಾಡಿನಾದ್ಯಂತ ನಾಡಪ್ರಭು ಕೆಂಪೇಗೌಡರ ಸ್ಮರಣೆಯನ್ನು ಮಾಡುತ್ತಾ ಪವಿತ್ರ ಸ್ಥಳಗಳಲ್ಲಿ ಪವಿತ್ರ ಮೃತ್ತಿಕೆಯನ್ನು ಸಂಗ್ರಹಣೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ ಅನಾವರಣ ಮಾಡುವ ಮಹತ್ವದ ನಿರ್ಣಯವನ್ನು ಸರ್ಕಾರ ಕೈಗೊಂಡಿದ್ದು ಪವಿತ್ರ ಮೃತ್ತಿಕೆಯನ್ನು ಸಮರ್ಪಣೆ ಮಾಡಲಾಗುತ್ತಿದೆ. ಯುವಕರು ನಮ್ಮ ಪೂರ್ವಜರ ಸಂದೇಶಗಳನ್ನು ಅಳವಡಿಸಿಕೊಳ್ಳುವ ಕೆಲಸವಾಗಬೇಕು ಎಂದು ತಿಳಿಸಿದರು.

V Somanna - Govindarajanagar Constituency Launches mruthike Collection Campaign
V Somanna – Govindarajanagar Constituency Launches mruthike Collection Campaign

ತದನಂತರ ಸಚಿವರು ಬೈಕ್ ಜಾಥಾಗೆ ಚಾಲನೆ ನೀಡಿದರು. ಡಿಜೆ, ಡೊಳ್ಳು ಕುಣಿತ, ನಗಾರಿ ವಾದ್ಯ ಸೇರಿದಂತೆ ವಿವಿಧ ಕಲಾತಂಡಗಳು ಮೆರುಗು ನೀಡಿದವು. ಬಾವುಟಗಳನ್ನು ಹಿಡಿದು 1000 ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ಬೈಕ್ ಜಾಥಾದಲ್ಲಿ ಪಾಲ್ಗೊಂಡು ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡರು.

ಡಾ|| ರಾಜ್ ಕುಮಾರ್ ವಾರ್ಡಿನ ಗಣೇಶ ದೇವಸ್ಥಾನದ ಆವರಣದಲ್ಲಿ ಪ್ರಾರಂಭವಾದ ರಥಯಾತ್ರೆ ಹಾಗೂ ಬೈಕ್ ಜಾಥಾ ಅಗ್ರಹಾರ ದಾಸರಹಳ್ಳಿ ವಾರ್ಡ್, ಗೋವಿಂದರಾಜನಗರ ವಾರ್ಡ್, ಕಾವೇರಿಪುರ ವಾರ್ಡ್, ಮೂಡಲಪಾಳ್ಯ ವಾರ್ಡ್, ಮಾರೇನಹಳ್ಳಿ ವಾರ್ಡ್, ಮಾರುತಿಮಂದಿರ ವಾರ್ಡ್, ನಾಗರಬಾವಿ ವಾರ್ಡ್, ನಾಯಂಡಹಳ್ಳಿ ವಾರ್ಡ್ ಗಳಲ್ಲಿ‌ ಸಂಚರಿಸಿದ ಭವ್ಯ ರಥದಲ್ಲಿ ಪವಿತ್ರ ಮೃತ್ತಿಕೆಯೊಂದಿಗೆ ಶ್ರೀ ಸೊಲ್ಲಾಪುರದಮ್ಮ ದೇವಾಲಯದ ಆವರಣವನ್ನು ತಲುಪಿತು.

ಈ ಸಂದರ್ಭದಲ್ಲಿ ಜಂಟಿ ಆಯುಕ್ತರಾದ ಯೋಗೇಶ್, ಗೋವಿಂದರಾಜನಗರ ಮಂಡಲ ಬಿ.ಜೆ.ಪಿ.ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಗಂಗಭೈರಯ್ಯ, ಕೆ.ಉಮೇಶ್ ಶೆಟ್ಟಿ, ವಾಗೇಶ್, ದಾಸೇಗೌಡ, ರಾಮಪ್ಪ, ಜಯರತ್ನ ಮತ್ತು ಬಿ.ಜೆ.ಪಿ. ಮುಖಂಡರಾದ ರಾಜಪ್ಪ, ಶ್ರೀಧರ್ ರವರು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Tags: #Saaksha TVbangalorev somanna
ShareTweetSendShare
Join us on:

Related Posts

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್‌ಷಾ ಕಿಚ್ಚ ಸುದೀಪ್

by Shwetha
June 28, 2026
0

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

ಬೆಂಗಳೂರು ನವನಿರ್ಮಾಣಕ್ಕೆ ಡಿಕೆ ಶಿವಕುಮಾರ್ 1.5 ಲಕ್ಷ ಕೋಟಿ ಮಾಸ್ಟರ್ ಪ್ಲಾನ್: ಟೀಕೆಗಳು ತಾತ್ಕಾಲಿಕ ಕೆಲಸಗಳು ಶಾಶ್ವತ;ಇತಿಹಾಸ ಸೃಷ್ಟಿಸಲು ಮೂರು ಕೆ ಗಳ ಮಂತ್ರ ಜಪಿಸಿದ CM

by Shwetha
June 28, 2026
0

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರೋಬ್ಬರಿ ಒಂದೂವರೆ ಲಕ್ಷ ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ಘೋಷಿಸುವ ಮೂಲಕ...

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

ಗ್ಯಾಂಗ್‌ಸ್ಟರ್ ಅವತಾರದಲ್ಲಿ ವಿನೋದ್ ಪ್ರಭಾಕರ್ ಅಬ್ಬರ: 80ರ ದಶಕದ ಭೂಗತ ಲೋಕಕ್ಕೆ ಮತ್ತೆ ಕರೆದೊಯ್ದ ಬಲರಾಮ

by Shwetha
June 28, 2026
0

2007 ರಲ್ಲಿ ತೆರೆಕಂಡ ಆ ದಿನಗಳು ಸಿನಿಮಾ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಮೈಲಿಗಲ್ಲು. ರಕ್ತಪಾತವಿಲ್ಲದೆಯೂ ಭೂಗತ ಲೋಕದ ಕಥೆಯನ್ನು ಎಷ್ಟು ಕಲಾತ್ಮಕವಾಗಿ ಹೇಳಬಹುದು ಎಂದು ನಿರ್ದೇಶಕ...

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

by Shwetha
June 28, 2026
0

ಚಿಕ್ಕಬಳ್ಳಾಪುರ:ನಗರದ ಕನ್ನಡ ಭವನದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿತು. ಶಾಸಕ ಪ್ರದೀಪ್ ಈಶ್ವರ್ ಅವರ ವರ್ತನೆ ಹಾಗೂ ಅವರ ವಿರುದ್ಧ ಒಕ್ಕಲಿಗ...

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

by Shwetha
June 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram