ನಾಯಂಡಹಳ್ಳಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಸಚಿವ ವಿ.ಸೋಮಣ್ಣ

1 min read

ನಾಯಂಡಹಳ್ಳಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಸಚಿವ ವಿ.ಸೋಮಣ್ಣ

ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ.ಸೋಮಣ್ಣ ಅವರು ಇಂದು ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ನಾಯಂಡಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಪರಿವೀಕ್ಷಣೆ ನಡೆಸಿದರು.

ಪರಿವೀಕ್ಷಣೆ ನಡೆಸಿ ಮಾತನಾಡಿದ ಸಚಿವರು, ಈ ಭಾಗದ ಜನತೆಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂಬರುವ ಏಪ್ರಿಲ್ ವೇಳೆಗೆ ಆಸ್ಪತ್ರೆ ಲೋಕಾರ್ಪಣೆಯಾಗಲಿದೆ. ಆಸ್ಪತ್ರೆಯ ನಿರ್ಮಾಣದ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಖಾಸಗಿ ಆಸ್ಪತ್ರೆಗೆ ಒಮ್ಮೆ ಭೇಟಿ ನೀಡಿದರೆ ನೂರಾರು ರೂ.ಗಳನ್ನು ತೆರಬೇಕು.

ಈ ಭಾಗದಲ್ಲಿ ಕಾರ್ಮಿಕ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆ ಇತ್ತು ಎಂದರು. ಇನ್ನು ನಾಯಂಡಹಳ್ಳಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸ್ಥಳೀಯರಿಗೆ ವಾಯುವಿಹಾರ ಮಾಡಲು ಅನುಕೂಲವಾಗುವಂತೆ ಕೆರೆಯನ್ನು ಅಭಿವೃದ್ಧಿ ಪಡಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ನಾಳೆ ಭಾರತ್ ಬಂದ್ | ಏನಿರುತ್ತೆ..? ಏನಿರಲ್ಲ..?

ಡಿಕೆಶಿ & ಸಿದ್ದರಾಮಯ್ಯ ಶಾಶ್ವತ ನಿರುದ್ಯೋಗಿಗಳು : ಬಿಜೆಪಿ

ಮರುಭೂಮಿಯಲ್ಲಿ ಸಿಲುಕಿರುವಂತಹ ಕನಸು ಬಿದ್ರೆ ಅದರ ಅರ್ಥವೇನು..?

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd