V somanna
ತುಮಕೂರು : ಉಪಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ನಿಶ್ಚಯ ಎಂದು ವಸತಿ ಸಚಿವ ವಿ ಸೋಮಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿ ಮಾತನಾಡಿದ ಅವರು, ನವಂಬರ್ 3ರಂದು ನಡೆಯಲಿರುವ ಉಮಕದನದಲ್ಲಿ ಬಹುಮತದಿಂದ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದರು.
ಅಲ್ಲದೇ ಈ ಉಪಚುನಾವಣೆಯಲ್ಲಿ ಅಭಿವೃದ್ಧಿಯತ್ತ ಜನರ ಒಲವಿದೆ. ಇನ್ನು ಎರಡು ಮುಕ್ಕಾಲು ವರ್ಷ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತ ನಡೆಸಲಿದ್ದು, ಜನರಿಗೆ ಅಗತ್ಯ ಸವಲತ್ತು, ಸೌಲಭ್ಯಗಳನ್ನು ಪೂರೈಸುವ ಕೆಲಸ ಪ್ರಾಮಾಣಿಕವಾಗಿ ಆಗಲಿದೆ ಎಂದರು. ರಸ್ತುತ ದೇಶದಲ್ಲಿ ಕೊರೊನಾ, ನೆರೆ, ಪ್ರವಾಹದಂತಹ ಸಂದಿಗ್ದ ಪರಿಸ್ಥಿತಿ ಉಂಟಾಗಿದೆ. ಇಂದಿನ ಸಂದಿಗ್ದ ಸಮಸ್ಯೆಗಳಿಗೆ ಮಾರ್ಗೋಪಾಯ ಮತ್ತು ಪರಿಹಾರ ಒದಗಿಸುವ ಕೆಲಸನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹ ರಾಜ್ಯದಲ್ಲಿ ಕೊರೊನಾವನ್ನು ಬುದ್ಧಿವಂತಿಕೆಯಿಂದ ನಿಭಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಬಾಯಿ ಚಪಲಕ್ಕೆ ಮಾತನಾಡುವ ಯತ್ನಾಳ್‍ರನ್ನು ಪಕ್ಷದಿಂದ ಕಿತ್ತುಹಾಕಿ: ಸಚಿವ ಈಶ್ವರಪ್ಪ ಗುಡುಗು
ಇದೇ ವೇಳೆ ಹಾಗೆಯೇ ಇದೇ ತಿಂಗಳ 28 ರಂದು ನಡೆಯಲಿರುವ ಕೋಲಾರ, ಚಿಕ್ಕಬಳ್ಳಾರು, ತುಮಕೂರು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾಗಳನ್ನೊಳಗೊಂಡ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚಿದಾನಂದ ಗೌಡ ಅವರ ಗೆಲುವು ನಿಶ್ಚಿತ. ಉತ್ತರ ಕರ್ನಾಟಕದಲ್ಲಿ ಅನಿರೀಕ್ಷಿತವಾಗಿ ನೆರೆ, ಪ್ರವಾಹ ಉಂಟಾಗಿದೆ. ಈಗಾಗಲೇ ಕಂದಾಯ ಸಚಿವ ಆರ್. ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹ ನೆರೆ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ನೆರೆಯಿಂದ ಕಷ್ಟಕ್ಕೆ ಒಳಗಾಗಿರುವ ಸಂತ್ರಸ್ತರ ನೆರವಿಗೆ ಸರ್ಕಾರ ಸದಾ ಸಿದ್ದವಿದೆ ಎಂದರು. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ನಿನ್ನೆಯೇ ಏನು ಹೇಳಬೇಕೋ ಅದನ್ನೆಲ್ಲಾ ಹೇಳಿದ್ದೇವೆ. ಯಡಿಯೂರಪ್ಪನವರು ನಮ್ಮ ಪ್ರಶ್ನಾತೀತ ನಾಯಕರು. ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿಯೇ ಇಲ್ಲ. ಅದು ಭರ್ತಿಯಾಗಿದೆ ಎಂದು ಹೇಳುವ ಮೂಲಕ ಯತ್ನಾಳ ಅವರಿಗೆ ಟಾಂಗ್ ಕೊಟ್ರು.
V somanna
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel