ಜನ್ಮದಿನದಂದೇ ಅಚ್ಚರಿ ಘೋಷಣೆ : ಚುನಾವಣಾ ರಾಜಕೀಯಕ್ಕೆ ಶ್ರೀನಿವಾಸ್ ಪ್ರಸಾದ್ ವಿದಾಯ V Srinivas Prasad saaksha tv
ಮೈಸೂರು : ಸಂಸದ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ 75ನೇ ವರ್ಷದ ಹುಟ್ಟುಹಬ್ಬದಂತೆ ಅಚ್ಚರಿಯ ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ.
ಜನ್ಮದಿನದ ಹಿನ್ನೆಲೆಯಲ್ಲಿ ಇಂದು ಶ್ರೀನಿವಾಸ್ ಪ್ರಸಾದ್ ಅವರು, ತಮ್ಮ 50 ವರ್ಷದ ರಾಜಕೀಯ ಜೀವನದ ಪುಸ್ತಕ ಬಿಡುಗಡೆ ಮಾಡಿದರು.
ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದರು.
ಇನ್ನ ಪುಸ್ತಕದಲ್ಲಿ ನನ್ನ ರಾಜಕೀಯ ಜೀವನದ ಎಲ್ಲ ಏಳು ಬೀಳು ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ.
ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣ ಮತ್ತೆ ಸ್ಪರ್ಧೆ ಮಾಡಿದ್ದೆ. ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ ಮಾತಿನಿಂದ ಹಿಂದೆ ಸರಿಯುವುದಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.










