ವಾಲ್ಮೀಕಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಿಎಂ
ಬೆಂಗಳೂರು : ವಾಲ್ಮೀಕಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಲ್ಮೀಕಿ ಸಮುದಾಯದ ಮೀಸಲಾತಿ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮೀಸಲಾತಿ ಹೆಚ್ಚಳ ಬಗ್ಗೆ ನೀತಿ ಸಂಹಿತೆ ಬಳಿಕ ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಈ ಬಾರಿ ವಾಲ್ಮೀಕಿ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ ಸಿಎಂ, ಅವರ ಹೆಸರುಗಳನ್ನು ಘೋಷಿಸಿದರು. ಕೊರೊನಾ ವೈರಸ್ ಹಿನ್ನೆಲೆ ಈ ಬಾರಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಅದ್ದೂರಿ ಕಾರ್ಯಕ್ರಮ ಮಾಡಿ, ಪ್ರಶಸ್ತಿ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ : ಕೊರೊನಾ ರೋಗಿಗಳಿಗೆ ಬೆಡ್ ಕೊಡದ 7 ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್…!
ಡಾ. ಕೆ.ಆರ್.ಪಾಟೀಲ್, ಬಿ.ಎಲ್.ವೇಣು, ಗೌರಿ ಕೊರಗ, ಮಾರಪ್ಪ ನಾಯಕ, ತಿಪ್ಪೇಸ್ವಾಮಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದವರು.
ಮೀಸಲಾತಿಗೆ ಆಗ್ರಹಿಸಿ ಘೋಷಣೆ
ಮುಖ್ಯಮಂತ್ರಿಗಳು ಶಾಸಕರ ಭವನದ ವಾಲ್ಮೀಕಿ ತಪೋವನದಿಂದ ತೆರಳಿದ ಬಳಿಕ ಅಲ್ಲಿ ನೆರೆದಿದ್ದ ವಾಲ್ಮೀಕಿ ಸಮುದಾಯದ ಮುಖಂಡರು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಪ್ರತಿಮೆ ಮುಂದೆ ಘೋಷಣೆ ಕೂಗಿದರು.
ನಂತರ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ನಾಲ್ಕು ದಶಕಗಳಿಂದ ಸಮುದಾಯ ಮೀಸಲಾತಿಯ ಬೇಡಿಕೆ ಇಡುತ್ತಾ ಬಂದಿದೆ.
ಸದ್ಯ ನೀತಿ ಸಂಹಿತೆ ಜಾರಿಯಲ್ಲಿದ್ದು, ನವೆಂಬರ್ 10ರ ಬಳಿಕ ಸಿಎಂ ಜೊತೆ ಚರ್ಚಿಸಿ ಮೀಸಲಾತಿ ಹೆಚ್ಚಳದ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಸಮುದಾಯದ ನಾಯಕ ಶ್ರೀರಾಮುಲು ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು.
ಇದಾದ ಬಳಿಕ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾತನಾಡಿ, ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇದೆ. ಅದಕ್ಕೆ ಸರ್ಕಾರ ಬದ್ಧವಾಗಿದೆ.
ಇದನ್ನೂ ಓದಿ : ಕೆ.ಜಿ ಹಳ್ಳಿ ಕೇಸ್ ಮಾಜಿ ಮೇಯರ್ ಸಂಪತ್‍ರಾಜ್ ನಾಪತ್ತೆ; ಆಸ್ಪತ್ರೆಗೆ ಸಿಸಿಬಿ ನೋಟಿಸ್..!
ಕಳೆದ ಬಾರಿ ಮೂರು ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ಐದು ಪ್ರಶಸ್ತಿ ನೀಡಲಾಗ್ತಿದೆ. ನೀತಿ ಸಂಹಿತೆ ಮುಗಿದ ಬಳಿಕ ಸಮುದಾಯದ ಅಪೇಕ್ಷೆಯನ್ನು ಘೋಷಣೆ ಮಾಡಲಾಗುತ್ತದೆ. ಚುನಾವಣಾ ನೀತಿ ಸಂಹಿತಿ ಹಿನ್ನೆಲೆ ಮೀಸಲಾತಿ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel