ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಿಕೊಳ್ಳಲಾಗುವುದು. ಈ ಇಲಾಖೆ ಮಾತ್ರವಲ್ಲದೆ ಇತರೆ ಇಲಾಖೆಗಳ ಖಾಲಿ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸರ್ಕಾರದಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ ಇದ್ದು, ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲಿಯೇ ಹೇಳಿದ್ದರು. ಈಗ ಡಿಕೆಶಿ ಕೂಡ ಈ ಹೇಳಿಕೆ ನೀಡಿದ್ದು, ಸರ್ಕಾರ ಈ ಕುರಿತು ಗಂಭೀರವಾಗಿ ಚಿಂತನೆ ನಡೆಸಿದೆ ಅನಿಸುತ್ತಿದೆ.








