ಮೂರು ದಿನ ಶಾಲೆಗಳಿಗೆ ರಜೆ Saaksha Tv
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೇ ನಗರದ ಶಾಲೆಗಳಿಗೆ ಮೂರು ದಿನಗಳ ಕಾಲ ರಜೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಉಸ್ತುವಾರಿ ಸಚಿವರು. ಶಾಲಾ ಮಕ್ಕಳಲ್ಲಿ ಹಾಗೂ ಶಿಕ್ಷಕರಲ್ಲಿ ಸೋಂಕು ಹೆಚ್ಚುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 45 ಶಾಲೆಯ 208 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನಲೇ 1 ರಿಂದ 9 ನೇ ತರಗತಿ ಮಕ್ಕಳಿಗೆ ರಜೆ ನೀಡಲಾಗಿದೆ. ನಾಳೆಯಿಂದ, ಸೋಮವಾರದವರೆ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಿದೆ ಎಂದರು.
ಅಲ್ಲದೇ ಗ್ರಾಮಗಳಲ್ಲಿ ಕೊರೊನಾ ಹರಡದಂತೆ ಗ್ರಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದೆ. ರವಿವಾರ ಮತ್ತೆ ಸಭೆ ಕರೆದು ಮುಂದೆ ತೆಗೆದುಕೊಳ್ಳಬೇಕಾಗದ ಕ್ರಮಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಹೇಳಿದರು.







