‘ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆದ್ಯತೆ’
ಬೆಂಗಳೂರು : ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಉಳಿದ 30% ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು. ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ. ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.