ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ  : ಸಚಿವ ಡಾ.ಕೆ.ಸುಧಾಕರ್

1 min read
Punjalakatte

ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ  : ಸಚಿವ ಡಾ.ಕೆ.ಸುಧಾಕರ್

 ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೋವಿಡ್ ಲಸಿಕೆಗೆ ಯಾವುದೇ ಕೊರತೆಯಾಗುವುದಿಲ್ಲ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಕೊರತೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನ್ನೆರಡೂವರೆ ಲಕ್ಷ ಡೋಸ್ ಕೋವಿಡ್ ಲಸಿಕೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿದೆ. ಮುಂದಿನ ನ ವಾರದೊಳಗೆ ಬರಲಿದೆ.

ಆದರೆ ಅದಕ್ಕೆ ಮುನ್ನ ಹೆಚ್ಚುವರಿಯಾಗಿ 4 ಲಕ್ಷ ಡೋಸ್ ಗಳನ್ನು ವಿಮಾನದಲ್ಲಿ ಕಳುಹಿಸಲಾಗುತ್ತಿದೆ. ಲಸಿಕೆಗೆ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ ಎಂದರು.

ಕೋವಿಡ್ ಎರಡನೇ ಅಲೆ ಇದೆ. ಅನೇಕ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಾಗರಿಕರು ಕೂಡ ಕೋವಿಡ್ ಸುರಕ್ಷತಾ ಕ್ರಮ ಅನುಸರಿಸಬೇಕು ಎಂಬುದನ್ನು ಅರಿಯಬೇಕು.

Vaccine

ಅನಗತ್ಯವಾಗಿ ಗುಂಪುಗೂಡುವುದು, ಮಾಸ್ಕ್ ಧರಿಸದಿರುವುದು ಮೊದಲಾದ ಕ್ರಮಗಳಿಗೆ ಈಗಾಗಲೇ ಕಡಿವಾಣ ಹಾಕಲಾಗಿದೆ. ಸಭೆ, ಸಮಾರಂಭಗಳನ್ನು 2 ತಿಂಗಳ ಮಟ್ಟಿಗೆ ಮುಂದೂಡಬೇಕು ಎಂದು ಕೋರಿದರು.

ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು. ಇದರಿಂದಾಗಿ ಹೆಚ್ಚಿನ ಜನರಿಗೆ ಲಸಿಕೆ ನೀಡಬಹುದು. ಎಲ್ಲರೂ ಕೂಡಲೇ ಕೋವಿಡ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಬೇಕು ಎಂದು ಸಚಿವರು ಟ್ವೀಟ್ ನಲ್ಲಿ ಕೋರಿದ್ದಾರೆ.

chinthamani
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd