ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬಹುಕೋಟಿ ಹಗರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರ (Nagendra) ಎಂದು ಜಾರಿ ನಿರ್ದೇಶನಾಲಯ (ED) ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ಈ ಪ್ರಕರಣದ ಕುರಿತು ತನಿಖೆ ನಡೆಸಿದ ಇಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ನಾಗೇಂದ್ರ ಸೇರಿದಂತೆ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ನಾಗೇಂದ್ರ ಅವರ ಆಜ್ಞೆಯಂತೆಯೇ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇಡಿ ಉಲ್ಲೇಖಿಸಲಾಗಿದೆ.
ಹೈದರಾಬಾದ್ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ (SIT) ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್ನಲ್ಲಿ ಆಗಸ್ಟ್ ತಿಂಗಳಿನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ (Nagendra), ಬಸನಗೌಡ ದದ್ದಲ್ (Basanagouda Daddal) ಹೆಸರು ಉಲ್ಲೇಖಿಸಿರಲಿಲ್ಲ. ಈಗ ಜಾರಿನಿರ್ದೇಶನಾಲಯ ನಾಗೇಂದ್ರ ಪ್ರಮುಖ ಆರೋಪಿ ಎಂದಿದೆ.