Vande Bharat Express : ರೈಲಿಗೆ ಕಲ್ಲು ತೂರಿದ್ದಕ್ಕೆ ವಿಭಿನ್ನವಾಗಿ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ ..
ಪಶ್ಚಿಮ ಬಂಗಾಳ ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಎರಡು ಬಾರಿ ಕಲ್ಲು ತೂರಾಟ ನಡೆದಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಚಾಲನೆ ನೀಡಿದ್ದರು.
ನಾಲ್ಕು ದಿನಗಳ ನಂತರ ಮೊದಲ ದಾಳಿ ನಡೆಯಿತು. ಮರುದಿನ ಮತ್ತೊಂದು ದಾಳಿ ನಡೆಯಿತು. ಮಂಗಳವಾರ ರಾಜ್ಯದ ಮಾಲ್ಡಾದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು. ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಆದರೆ ಆ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನ ಈ ಬಗ್ಗೆ ಕೇಳಿದಾಗ ಬೇರೆಯದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ರೈಲಿಗೆ ಕಲ್ಲು ತೂರಿದ ಕುರಿತು ಪ್ರಶ್ನೆ ಕೇಳಿದ್ದಕ್ಕೆ ನಾನು ಗಂಗಾಸಾಗರ ಮೇಳಕ್ಕೆ ಹೋಗುತ್ತಿದ್ದೇನೆ. ನಾನು ಈಗ ಒಳ್ಳೆಯ ಮನಸ್ಥಿತಿಯಲ್ಲಿದ್ದೇನೆ. ಗಂಗಾಸಾಗರದ ಬಗ್ಗೆ ಏನು ಬೇಕಾದರೂ ಕೇಳಿ,’’ ಎಂದು ಮಮತಾ ಬ್ಯಾನರ್ಜಿ ಹೇಳಿದರು.
Vande Bharat Express: Mamata Banerjee reacts differently to stone pelting on train..








