ADVERTISEMENT
Sunday, November 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood : ಆಟಿಸಂ ಸಮಸ್ಯೆ ವಿವರಿಸುವ ಕನ್ನಡದ ಮೊದಲ ಸಿನಿಮಾ.. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಸಾರಥ್ಯದಲ್ಲಿ ‘ವರ್ಣಪಟಲ’

Namratha Rao by Namratha Rao
March 9, 2022
in Cinema, Newsbeat, ಮನರಂಜನೆ
varnapatala kannada film - saakshatv

varnapatala kannada film - saakshatv

Share on FacebookShare on TwitterShare on WhatsappShare on Telegram

Sandalwood : ಆಟಿಸಂ ಸಮಸ್ಯೆ ವಿವರಿಸುವ ಕನ್ನಡದ ಮೊದಲ ಸಿನಿಮಾ.. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಸಾರಥ್ಯದಲ್ಲಿ ‘ವರ್ಣಪಟಲ’

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ‘ವರ್ಣಪಟಲ’ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ವರ್ಲ್ಡ್ ಪ್ರೀಮಿಯರ್ ಫಿಲ್ಮ್‌ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್‌ ಫಿಲ್ಮ್ ಅವಾರ್ಡ್‌ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಜೊತೆಗೆ ಹಲವು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

Related posts

ಬೆಂಗಳೂರು ದೇಶದ ಆರ್ಥಿಕತೆಯ ಇಂಜಿನ್: ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಎಂದ ಪ್ರಧಾನಿ ಮೋದಿ

ಬೆಂಗಳೂರು ದೇಶದ ಆರ್ಥಿಕತೆಯ ಇಂಜಿನ್: ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಎಂದ ಪ್ರಧಾನಿ ಮೋದಿ

November 14, 2026
ಕೇಂದ್ರ ರಾಜಕೀಯದಲ್ಲಿ ಸಂಚಲನ: ಮೋದಿ ಸಂಪುಟದ 12 ಸಚಿವರಿಗೆ ಗೇಟ್‌ಪಾಸ್ ಸಾಧ್ಯತೆ, ನವೆಂಬರ್ 18ರ ಔತಣಕೂಟದತ್ತ ಎಲ್ಲರ ಚಿತ್ತ!

ಕೇಂದ್ರ ರಾಜಕೀಯದಲ್ಲಿ ಸಂಚಲನ: ಮೋದಿ ಸಂಪುಟದ 12 ಸಚಿವರಿಗೆ ಗೇಟ್‌ಪಾಸ್ ಸಾಧ್ಯತೆ, ನವೆಂಬರ್ 18ರ ಔತಣಕೂಟದತ್ತ ಎಲ್ಲರ ಚಿತ್ತ!

November 14, 2026

ನೈಜಘಟನೆಯಾಧಾರಿತ ವರ್ಣಪಟಲ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.. ಎಲ್ಲರ ಅಮ್ಮಂದಿರ ತರ ನಾನು ಅಮ್ಮ ಅಲ್ಲ.. ಎಲ್ಲರ ಮಕ್ಕಳಂತೆ ನನ್ನ ಮಗಳಲ್ಲ .. ಎಂಬ ಡೈಲಾಗ್ ನಿಂದ ಶುರುವಾಗುವ ಟ್ರೇಲರ್ ನಲ್ಲಿ ಪ್ರೀತಿ, ಮಮತೆ, ನೋವು ಎಲ್ಲವನ್ನು ಒಳಗೊಂಡಿದೆ.
ನಿತ್ಯಾ ತಾನು ಪ್ರೀತಿಸಿದ ಹುಡುಗ ಮೈಕಲ್ ನನ್ನು ಮದುವೆಯಗ್ತಾಳೆ . ಮದುವೆಯ ಬಳಿಕ ಹೆಣ್ಣು ಮಗುವಿಗೆ ನಿತ್ಯ ತಾಯಿ ಆಗ್ತಾಳೆ. ಆ ಮಗುವೇ ಮೈನಾ. ಆದ್ರೆ ಎಲ್ಲಾ ಸರಿಯಿದ್ದ ನಿತ್ಯಾಳ ಬದುಕಲ್ಲಿ ಮೈನಾ ಅನ್ನೋ ಮಗಳಿಂದ ಜೀವನವೇ ಬದಲಾಗಿ ಹೋಗುತ್ತೆ.. ಮೈನಾ ಆಟಿಸಂ ಅನ್ನೋ ಖಾಯಿಲೆಯಿಂದ ಬಳಲುತ್ತಿರುತ್ತಾಳೆ. ಇದರಿಂದ ನಿತ್ಯಾ ಸಾಕಷ್ಟು ತೊಂದರೆ ಅನುಭವಿಸುತ್ತಾಳೆ. ಆ ಖಾಯಿಲೆಯಿಂದ ಮೈನಾಳನ್ನು ನಿತ್ಯಾ ಹೇಗೆ ಹೊರ ತರುತ್ತಾರೆ ಅನ್ನೋದು ಚಿತ್ರಕಥೆ.

varnapatala kannada film - saakshatv

ಮಕ್ಕಳನ್ನು ಹೆಚ್ಚಾಗಿ ಕಾಡುವ ಆಟಿಸಂ ಸಮಸ್ಯೆ ಕುರಿತು ನಿರ್ದೇಶಕರು ಬೆಳಕು ಚೆಲ್ಲಿದ್ದಾರೆ. ಜೊತೆಗೆ ತಾಯಿ ಮಗುವಿನ ಬಾಂಧವ್ಯವನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ. ನಿತ್ಯಾ ಪಾತ್ರಕ್ಕೆ ಕಿರುತೆರೆಯ ಖ್ಯಾತ ನಟಿ ಜ್ಯೋತಿ ರೈ ನಾಯಕಿಯಾಗಿ ನಟಿಸಿದ್ದು, ತುಳು ಸಿನಿಮಾಗಳಿಂದ ಖ್ಯಾತಿ ಗಳಿಸಿರುವ ಅನೂಪ್ ಸಾಗರ್ ನಾಯಕನಾಗಿ ನಟಿಸಿದ್ದಾರೆ. ಖ್ಯಾತ ಬಹುಭಾಷಾ ನಟಿ ಸುಹಾಸಿನಿ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಧನಿಕ ಹೆಗ್ಡೆ, ಚೇತನ್ ರೈ ಮಾಣಿ, ಇಳಾ ವಿಟ್ಲಾ, ಅರವಿಂದ್ ರಾವ್‌ ಹಾಗೂ ಶ್ರೀಕಾಂತ್ ಹೆಬ್ಳಿಕರ್ ಮೊದಲಾದವರು ನಟಿಸಿದ್ದಾರೆ.

ವರ್ಣಪಟಲ ಸಿನಿಮಾದ ಚಿತ್ರಕಥೆ ಹಾಗೂ ನಿರ್ಮಾಣವನ್ನು ಡಾ. ಸರಸ್ವತಿ ಹೊಸದುರ್ಗ, ಕವಿತಾ ಸಂತೋಷ್ ಹೊತ್ತಿದ್ದು. ಈ ಚಿತ್ರಕ್ಕೆ ಕಾರ್ತೀಕ್ ಸರ್ಗೂರು ರವರ ಸಾಹಿತ್ಯವಿದ್ದು, ಕಿರುತೆರೆಯ ಖ್ಯಾತ ನಿರ್ದೇಶಕ ವಿನು ಬಳಂಜ ಸಂಭಾಷಣೆ ಬರೆದಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ದಕ್ಷಿಣ ಕನ್ನಡದ ಮಡಂತ್ಯಾರು, ಮಂಗಳೂರು, ಮಡಿಕೇರಿ, ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಕನ್ನಡದಲ್ಲಿ ಆಟಿಸಂ ಕುರಿತು ತಯಾರಾಗಿರುವ ಮೊದಲ ಸಿನಿಮಾ ವರ್ಣಪಟಲ..ಕಮರ್ಷಿಯಲ್ ಸಿನಿಮಾಗಳ ನಡುವೆ ಕಥೆಯನ್ನೇ ನಾಯಕರನ್ನಾಗಿಸಿ, ಬೇರೆ ಭಾಷೆಗಳ ಕಥೆಗಳ ಜೊತೆಗೆ ಪೈಪೋಟಿ ಕೊಂಡಂತೆ ಇರುವ, ಅಟಿಸಂ ಮಕ್ಕಳ ತಂದೆತಾಯಿಗಳಿಗೆ ಒಂದು ಬಾಹ್ಯ ಬೆಂಬಲವನ್ನು ಕೊಡುವ ಉದ್ದೇಶ ಈ ವರ್ಣಪಟಲ ಸಿನಿಮಾದ ಉದ್ದೇಶವಾಗಿದ್ದು , ಇದು ಎಲ್ಲರ ಗಮನವನ್ನು ಸೆಳೆಯುತ್ತಿದೆ, ಅನ್ನುವುದು ವಿಶೇಷ.

Tags: kannada filmsSandalwoodvarnapatala
ShareTweetSendShare
Join us on:

Related Posts

ಬೆಂಗಳೂರು ದೇಶದ ಆರ್ಥಿಕತೆಯ ಇಂಜಿನ್: ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಎಂದ ಪ್ರಧಾನಿ ಮೋದಿ

ಬೆಂಗಳೂರು ದೇಶದ ಆರ್ಥಿಕತೆಯ ಇಂಜಿನ್: ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಎಂದ ಪ್ರಧಾನಿ ಮೋದಿ

by Shwetha
November 14, 2026
0

ಭಾರತದ ಆರ್ಥಿಕ ಬೆಳವಣಿಗೆಗೆ ಬೆಂಗಳೂರು ಪ್ರಮುಖ ಇಂಜಿನ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಬೆಂಗಳೂರಿನ ನನ್ನ ಸಹೋದರ ಸಹೋದರಿಯರಿಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು...

ಕೇಂದ್ರ ರಾಜಕೀಯದಲ್ಲಿ ಸಂಚಲನ: ಮೋದಿ ಸಂಪುಟದ 12 ಸಚಿವರಿಗೆ ಗೇಟ್‌ಪಾಸ್ ಸಾಧ್ಯತೆ, ನವೆಂಬರ್ 18ರ ಔತಣಕೂಟದತ್ತ ಎಲ್ಲರ ಚಿತ್ತ!

ಕೇಂದ್ರ ರಾಜಕೀಯದಲ್ಲಿ ಸಂಚಲನ: ಮೋದಿ ಸಂಪುಟದ 12 ಸಚಿವರಿಗೆ ಗೇಟ್‌ಪಾಸ್ ಸಾಧ್ಯತೆ, ನವೆಂಬರ್ 18ರ ಔತಣಕೂಟದತ್ತ ಎಲ್ಲರ ಚಿತ್ತ!

by Shwetha
November 14, 2026
0

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಸ್ಥಿತ್ಯಂತರಗಳಿಗೆ ವೇದಿಕೆ ಸಿದ್ಧವಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಭರ್ಜರಿ ಸಿದ್ಧತೆ...

ಗೃಹಲಕ್ಷ್ಮಿಯರಿಗೆ ಬಂಪರ್ ಸಿಹಿಸುದ್ದಿ: 34ನೇ ಕಂತಿನ ಬೆನ್ನಲ್ಲೇ ಬಾಕಿ ಇರುವ 35 ಹಾಗೂ 36ನೇ ಕಂತಿನ ಒಟ್ಟು 4,000 ರೂ. ಹಣ ಬಿಡುಗಡೆಗೆ ಸರ್ಕಾರದ ಭರ್ಜರಿ ಸಿದ್ಧತೆ!

ಗೃಹಲಕ್ಷ್ಮಿಯರಿಗೆ ಬಂಪರ್ ಸಿಹಿಸುದ್ದಿ: 34ನೇ ಕಂತಿನ ಬೆನ್ನಲ್ಲೇ ಬಾಕಿ ಇರುವ 35 ಹಾಗೂ 36ನೇ ಕಂತಿನ ಒಟ್ಟು 4,000 ರೂ. ಹಣ ಬಿಡುಗಡೆಗೆ ಸರ್ಕಾರದ ಭರ್ಜರಿ ಸಿದ್ಧತೆ!

by Shwetha
November 14, 2026
0

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಹಾಗೂ ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯ ಕೋಟ್ಯಂತರ ಫಲಾನುಭವಿಗಳಿಗೆ ಸರ್ಕಾರ ಭರ್ಜರಿ...

ಯಾವ ನ್ಯಾಯಮೂರ್ತಿಗಳು ಬಿಜೆಪಿಯವರು, ಯಾರು ಟಿಎಂಸಿಯವರು ಪಟ್ಟಿ ಕೊಡಿ: ಅಭಿಷೇಕ್ ಬ್ಯಾನರ್ಜಿ ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕೋಲ್ಕತ್ತಾ ಹೈಕೋರ್ಟ್!

ಯಾವ ನ್ಯಾಯಮೂರ್ತಿಗಳು ಬಿಜೆಪಿಯವರು, ಯಾರು ಟಿಎಂಸಿಯವರು ಪಟ್ಟಿ ಕೊಡಿ: ಅಭಿಷೇಕ್ ಬ್ಯಾನರ್ಜಿ ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕೋಲ್ಕತ್ತಾ ಹೈಕೋರ್ಟ್!

by Shwetha
November 14, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಈಗ ಮತ್ತೊಂದು ಬೃಹತ್ ಸಂಘರ್ಷ ಭುಗಿಲೆದ್ದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ನೀಡಲಾಗಿದ್ದ...

ನನ್ನ ಫೋನ್ ಟ್ಯಾಪ್ ಆಗುತ್ತಿದೆ; ಸಾಕ್ಷ್ಯಗಳಿವೆ ಎಂದ ರಾಹುಲ್ ಗಾಂಧಿ: ಮೋದಿ ಅವರಿಗೆ ಮತ್ತೆ ಬಹಿರಂಗ ಚರ್ಚೆಯ ಸವಾಲು

ನನ್ನ ಫೋನ್ ಟ್ಯಾಪ್ ಆಗುತ್ತಿದೆ; ಸಾಕ್ಷ್ಯಗಳಿವೆ ಎಂದ ರಾಹುಲ್ ಗಾಂಧಿ: ಮೋದಿ ಅವರಿಗೆ ಮತ್ತೆ ಬಹಿರಂಗ ಚರ್ಚೆಯ ಸವಾಲು

by Shwetha
November 14, 2026
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೋನ್ ಕದ್ದಾಲಿಕೆಯ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಮೊಬೈಲ್ ಫೋನ್‌ನಲ್ಲಿ ತಾವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram