ಚಿಕ್ಕಮಗಳೂರು : ಇಪ್ಪತ್ತು ದಿನಗಳ ಬಿಡುವಿನ ಬಳಿಕ ಚಿಕ್ಕಮಗಳೂರಿನಲ್ಲಿ ವರುಣದೇವ ಅಬ್ಬರಿಸಿ ಬೊಬ್ಬರಿಯುತ್ತಿದ್ದಾನೆ. ಇಂದು ಬೆಳಗ್ಗೆಯಿಂದಲೇ ಚಿಕ್ಕಮಗಳೂರು ನಗರದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಬಿಸಿಲು ಇತ್ತು. ಮಧ್ಯಾಹ್ನ 1 ಗಂಟೆ ಆರಂಭವಾದ ದಿಢೀರ್ ಮಳೆ ಸುಮಾರು ಅರ್ಧ ಗಂಟೆಗಳ ಕಾಲ ಮನಸ್ಸೋ ಇಚ್ಛೆ ಸುರಿದು ಮಲೆನಾಡಿಗರಿಗೆ ಮತ್ತೆ ಆತಂಕ ತಂದಿಟ್ಟಿದ್ದಾನೆ.
ಆಗಸ್ಟ್ ಮೊದಲ ವಾರದಲ್ಲಿ ಅಬ್ಬರಿದ್ದ ವರುಣ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದ್ದ ಮಳೆರಾಯ, ಇಂದು ಅಬ್ಬರಿಸಿ ಬೊಬ್ಬಿರಿದಿದ್ದಾನೆ. ನೋಡ-ನೋಡ್ತಿದ್ದಂತೆ ಆರಂಭವಾದ ಮಳೆ ಧಾರಾಕಾರವಾಗಿ ಸುರಿದಿದೆ. ಭಾರೀ ಮಳೆ ಕಂಡು ಸ್ಥಳೀಯರು ಮತ್ತೆ ಕಂಗಾಲಾಗಿದ್ದಾರೆ. ಮಲೆನಾಡು ಭಾಗದಲ್ಲೂ ಅಲ್ಲಲ್ಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ.








