ಬೆಂಗಳೂರು : ಕೊರೊನಾ ಅಬ್ಬರದ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಸಿಂಚನವಾಗಿದೆ. ಇಂದು ಬೆಳಗ್ಗೆಯಿಂದ ನಗರದ ಹಲವೆಡೆ ಮೋಸ ಮುಸುಕಿದ ವಾತಾವರಣ ಕಂಡು ಬಂದಿತ್ತು. ಸಂಜೆ 4 ಗಂಟೆ ಬಳಿಕ ನಗರದ ನಾಗರಭಾವಿ, ವಿಜಯನಗರ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯಿತು.
ಈ ಮಳೆಯಿಂದಾಗಿ ಬೆಂಗಳೂರಿನ ಕೆಲ ಭಾಗಗಳಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿದ್ದು, ದ್ವಿಚಕ್ರ ಸವಾರರು ಮಳೆಯಲ್ಲಿ ಸಿಲುಕುವಂತಾಯ್ತು. ಬಿಟ್ಟು ಬಿಟ್ಟು ಮಳೆ ಬರುತ್ತಿದ್ದು, ಬೆಂಗಳೂರು ಸಿಟಿ ಕೂಲ್ ಆಗಿದೆ.
ಇತ್ತ ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.








