ಬೆಂಗಳೂರು : ಭಾನುವಾರ ರಾತ್ರಿ ಮತ್ತು ಸೋಮವಾರ ನಸುಕಿನಲ್ಲಿ ರಾಜ್ಯದ ಹಲವೆಡೆ ಮಳೆಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ಬೆಳಗಿನ ಜಾವ ಬಿರುಸಾಗಿ ಮಳೆ ಸುರಿದಿದೆ. ಹೆಬ್ರಿ, ಪಡುಬಿದ್ರಿ, ಹಿರಿಯಡ್ಕ, ಬ್ರಹ್ಮಾವರದಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಪಡುಬಿದ್ರಿಯ ಕಲ್ಸಂಕ ಸೇತುವೆ ಕಾಮಗಾರಿ ಪ್ರದೇಶದಲ್ಲಿ ಮಳೆ ನೀರು ಜಮಾವಣೆಗೊಂಡು ಕೃತಕ ನೆರೆ ಸೃಷ್ಟಿ ಯಾಗಿದೆ. ಇತ್ತ ಕೊಡಗು ಜಿಲ್ಲೆಯ ಹಲವೆಡೆ ಇಂದು ಬೆಳಿಗ್ಗೆ ಮಳೆಯಾಗಿದೆ. ಭಾಗಮಂಡಲ, ನಾಪೋಕ್ಲು, ತಲಕಾವೇರಿ, ಅಪ್ಪಂಗಳ ಸುತ್ತಮುತ್ತ ಮಳೆಯಾಗುತ್ತಿದೆ. ಜಿಲ್ಲೆಯ ಉಳಿದೆಡೆ ದಟ್ಟವಾದ ಮೋಡ ಕವಿದ ವಾತಾವರಣ ಇದೆ.
ಕರಾವಳಿಯ ಜಾನಪದ ಕ್ರೀಡೆಗೆ ಮೈಸೂರಿನಲ್ಲಿ ಅದ್ದೂರಿ ವೇದಿಕೆ: ಅಕ್ಟೋಬರ್ 18 ರಿಂದ ವಿಜಯ ದಶಮಿ ಕರೆಯಲ್ಲಿ ಕಂಬಳದ ಗತ್ತು ನೋಡಲು ಸನ್ನದ್ಧರಾಗಿ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮಕ್ಕೆ ಈ ಬಾರಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಮೆರುಗು ಸಿಗಲಿದೆ. ಅರಮನೆ ನಗರಿಯ ಅಂಗಳದಲ್ಲಿ ಅಕ್ಟೋಬರ್ 18 ಮತ್ತು...








