Modi | “ವರುಷ ಎಂಟು, ಅವಾಂತರಗಳು ನೂರೆಂಟು”ಪುಸ್ತಕ ಬಿಡುಗಡೆ
ಬೆಂಗಳೂರು : ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ನರೇಂದ್ರ ಮೋದಿ ಅವರ ಸರ್ಕಾರದ ಎಂಟು ವರ್ಷಗಳ ಆಡಳಿತ ವೈಫಲ್ಯಗಳ ಕುರಿತಾದ “ವರುಷ ಎಂಟು, ಅವಾಂತರಗಳು ನೂರೆಂಟು” ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು.

ಸಿದ್ದರಾಮಯ್ಯನವರ ಪ್ರಕಾರ ಮೋದಿ ಸರ್ಕಾರದ 8 ವರ್ಷಗಳ 8 ಅನಾಹುತಗಳು ಹೀಗಿವೆ
- ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ.
- ಬೆಲೆಯೇರಿಕೆ ಹಿಂದೆಂದು ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರ ಗತಿಗೆ ಮುಟ್ಟಿದೆ.
- ನಿರುದ್ಯೋಗ ತಾರಕಕ್ಕೇರಿದೆ.
- ರಾಜ್ಯಗಳ ಆರ್ಥಿಕತೆ ಕುಸಿದುಹೋಗುತ್ತಿದೆ.
- ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ ಇದರ ಜೊತೆಯಲ್ಲಿ ದೇಶದ ಪ್ರಜಾಪ್ರಭುತ್ವ ಭಯಬೀತವಾಗಿದೆ.
- ಜಿಎಸ್‌ಟಿ, ನೋಟು ಅಮಾನ್ಯೀಕರಣ, ಕೊರೊನಾ ನಿರ್ವಹಣೆಯ ಎಡಬಿಡಂಗಿ ನಿಲುವುಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿದೆ.
- ದೇಶದ ಜನರು ಕಷ್ಟಪಟ್ಟು ಕಟ್ಟಿದ್ದ ಲಾಭದಾಯಕ ಸಂಸ್ಥೆ, ಕಾರ್ಖಾನೆಗಳನ್ನು ಬಿಡಿಗಾಸಿಗೆ ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ.
- ರೈತರು, ಕಾರ್ಮಿಕ, ಮಹಿಳೆ, ಯುವ ಜನರ ವಿರೋಧಿ ಕಾನೂನುಗಳನ್ನು ಜಾರಿಗೆ ತಂದು ಅದರ ಮೂಲಕ ಜನರನ್ನು ಶತ್ರುಗಳಂತೆ ಭಾವಿಸಿ, ಧಮನಿಸಲಾಗುತ್ತಿದೆ. ಜನರನ್ನು ಬಡತನಕ್ಕೆ ತಳ್ಳಲಾಗುತ್ತಿದೆ, ಅಂಬಾನಿ, ಅದಾನಿಗಳಂತಹಾ ಕಾರ್ಪೋರೇಟ್ ಬಂಡವಾಳಿಗರನ್ನು ಕೊಬ್ಬಿಸಿ ಮೆರೆಸಲಾಗುತ್ತಿದೆ.