ಲಸಿಕೆ ಹಾಕಿಸಿಕೊಳ್ಳುವ ಮುನ್ನ ರಕ್ತ ದಾನ ಮಾಡಿದ ವಸಿಷ್ಠ ಸಿಂಹ
ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ. ಅಲ್ಲದೇ ಕೊರೊನಾ ಲಸಿಕೆ ಬಗ್ಗೆಯೂ ಅರಿವು ಮೂಡಿಸಲಾಗ್ತಿದೆ. ಹಲವೆಡೆ ಜನರು ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡುವಂತೆ ಮನವಿಗಳನ್ನೂ ಮಾಡಲಾಗ್ತಿದೆ.
ಕೊರೊನಾ ಲಸಿಕೆ ಪಡೆದ ಕೆಲವು ತಿಂಗಳು ರಕ್ತ ದಾನಮಾಡುವ ಹಾಗಿಲ್ಲ. ಹಾಗಾಗಿ ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದ ಅಭಾವ ಎದುರಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆಯಾಗಿ ಲಸಿಕೆ ಪಡೆಯುವ ಮೊದಲೇ ರಕ್ತದಾನ ಮಾಡಿ ಎಂದು ಕರೆ ನೀಡಲಾಗಿದೆ. ಇದೀಗ ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ ಕೂಡ ರಕ್ತ ದಾನ ಮಾಡುವ ಮೂಲಕ ಯುವಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಈಗಾಗಲೇ ಅನೇಕ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ ಮಾಡಿದ ನಟ ವಸಿಷ್ಠ ಬಳಿಕ ರಕ್ತದಾನ ಮಾಡಿದ್ದಾರೆ.
ಅಲ್ಲದೇ ಕೊರೊನಾ ಲಸಿಕೆ ಪಡೆದ ಬಳಿಕ 6 ತಿಂಗಳ ಕಾಲ ರಕ್ತದಾನ ಮಾಡುವ ಹಾಗಿಲ್ಲ. ವಿಸಿಷ್ಠ ಸಿಂಹ ರಕ್ತ ದಾನ ಮಾಡುವ ಜೊತೆಗೆ ಲಸಿಕೆ ಪಡೆಯುವ ಮುನ್ನ ಎಲ್ಲರೂ ರಕ್ತದಾನ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.