ರಾಘವೇಂದ್ರ ಬ್ಯಾಂಕ್ ಹಗರಣ ತನಿಖೆಗೆ ಕಾಣದ ಕೈಗಳ ಅಡ್ಡಿ?
ಶ್ರೀ ಗುರು ರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್ ನ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಕುರಿತು ಹಲವಾರು ಅನುಮಾನಗಳು ಮೂಡತೊಡಗಿವೆ.
ಮಾಜಿ ಸಿಇಒ ವಾಸುದೇವ ಮಯ್ಯ ತಮ್ಮ ಡೆತ್ ನೋಟ್ ನಲ್ಲಿ ಹಾಲಿ ಸಿಇಒ ಸಂತೋಷ್ ಸೇರಿದಂತೆ 11 ನಿರ್ದೇಶಕರು ಮತ್ತು ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದರ ಆಧಾರದಲ್ಲಿ ಮಯ್ಯ ಅವರ ಪುತ್ರಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ದೂರನ್ನು ದಾಖಲು ಮಾಡಿಕೊಂಡಿರುವ ಸಿಐಡಿ ಪೊಲೀಸರು ಹಲವಾರು ವಾಣಿಜ್ಯೋದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ವಾಣಿಜ್ಯೋದ್ಯಮಿಗಳು ಶ್ರೀ ಗುರು ರಾಘವೇಂದ್ರ ಬ್ಯಾಂಕಿಗೆ ನಕಲಿ ದಾಖಲೆಗಳನ್ನು ನೀಡಿ ಸಾಲ ಪಡೆದಿದ್ದ ಆರೋಪಗಳು ಕೇಳಿ ಬಂದಿದ್ದವು.
ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಕೇವಲ ವಾಣಿಜ್ಯೋದ್ಯಮಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆಯೇ ಹೊರತು ಮಯ್ಯ ಅವರು ಉಲ್ಲೇಖ ಮಾಡಿರುವ ವ್ಯಕ್ತಿಗಳ ವಿಚಾರಣೆ ಮಾಡುತ್ತಿಲ್ಲ ಅಥವಾ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಏಕೆ ಎಂಬ ಪ್ರಶ್ನೆಗಳು ಎದುರಾಗುತ್ತಿವೆ.
ಮಯ್ಯ ತಮ್ಮ ಡೆತ್ ನೋಟ್ ನಲ್ಲಿ ಹೆಸರಿಸಲಾಗಿರುವ ಹಾಲಿ ಸಿಇಒ ಮತ್ತು
ಬ್ಯಾಂಕಿನ ಇತರೆ ಸಿಬ್ಬಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದರೂ ಅವರನ್ನು ಬಂಧಿಸುವ ಗೋಜಿಗೆ ಹೋಗಿಲ್ಲದಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.
ಇದಲ್ಲದೇ, ಮಾಜಿ ಸಿಇಒ ಮಯ್ಯ ಅವರು ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ.
ಅಂದರೆ, ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಪಾರು ಮಾಡಲು ರಾಜಕೀಯ ಮತ್ತು ಅಧಿಕಾರಸ್ಥರ ಪ್ರಭಾವ ಹಸ್ತಕ್ಷೇಪ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅದೇ ರೀತಿ ಕೆಲವು ರಾಜಕಾರಣಿಗಳು ಅಧಿಕಾರಿಗಳು ಬ್ಯಾಂಕಿನ ದೈನಂದಿನ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಲಿ ಸಿಇಒ ಸಂತೋಷ್ ಅವರಿಗೆ ನೊಟೀಸ್ ಅನ್ನು ಜಾರಿ ಮಾಡಿದೆ. ಆದರೆ, ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರಗತಿಯನ್ನು ಸಾಧಿಸಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ಅಂದರೆ, ಜಾರಿ ನಿರ್ದೇಶನಾಲಯದ ತನಿಖೆಯಲ್ಲಿಯೂ ಕಾಣದ ಕೈಗಳು ಹಸ್ತಕ್ಷೇಪ ಮಾಡುತ್ತಿವೆಯೇ? ಎಂಬ ಅನುಮಾನಗಳು ಮೂಡತೊಡಗಿವೆ.
ಒಂದು ವೇಳೆ, ಇಂತಹ ಯಾವುದೇ ಹಸ್ತಕ್ಷೇಪಗಳು ಇಲ್ಲದಿದ್ದರೆ ಜಾರಿ ನಿರ್ದೇಶನಾಲಯ ತನಿಖೆಯನ್ನು ಚುರುಕುಗೊಳಿಸಿ ಹಾಲಿ ಸಿಇಒ ಮತ್ತು ಅಧ್ಯಕ್ಷ ರಾಮಕೃಷ್ಣ ಸೇರಿ ಬ್ಯಾಂಕಿನ ಇತರೆ ನಿರ್ದೇಶಕರನ್ನು ಏಕೆ ವಿಚಾರಣೆಗೆ ಒಳಪಡಿಸಿಲ್ಲ ಎಂಬ ಪ್ರಶ್ನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಉತ್ತರ ನೀಡಬೇಕಾಗಿದೆ.
ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು
ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...








