ರಾಯಚೂರು : ಕರ್ನಾಟಕವನ್ನು ಕೇಂದ್ರ ಸರ್ಕಾರ ಗುಲಾಮರ ರೀತಿ ನೋಡುತ್ತಿದೆ. ಪ್ರಧಾನಿ ಮೋದಿ ಎಲ್ಲಾ ಕಡೆ ಹೋಗುತ್ತಾರೆ ಕರ್ನಾಟಕಕ್ಕೆ ಬರಲ್ಲ. ನಮ್ಮ ಎಂಪಿಗಳು ದನಕಾಯುತ್ತಿದ್ದಾರಾ? ಯಾಕೆ ಪ್ರಧಾನಿಯನ್ನು ಕರೆದುಕೊಂಡು ಬರುತ್ತಿಲ್ಲ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಗುಡುಗಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ.
ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ಮಾನವೀಯತೆಯಿಲ್ಲ. ಇತ್ತೀಚೆಗೆ ಎಲ್ಲರೂ ಹೆಲಿಕಾಪ್ಟರ್ ರಾಜಕಾರಣಿಗಳಾಗಿದ್ದಾರೆ.
ಯಡಿಯೂರಪ್ಪನವರ ಬಳಿ ಹೆಲಿಕಾಪ್ಟರ್ ಇದೆ. ಜೆಡಿಎಸ್, ಕಾಂಗ್ರೆಸ್ಸಿನವರು ಹೆಲಿಕಾಪ್ಟರಿನಲ್ಲೇ ಬರುತ್ತಾರೆ. ಇನ್ನು ಮುಂದೆ ಕಾರಲ್ಲಿ ಕೆಳಗಡೆ ಓಡಾಡಲು ಆಗದ ರೋಗ ಬಂದಿದೆ ಅಂತ ವೈದ್ಯರು ಸರ್ಟಿಫಿಕೇಟ್ ಕೊಡಬೇಕು.
ಹೆಲಿಕಾಪ್ಟರಿನಲ್ಲಿ ಓಡಾಡುವವರಿಗಾಗಿ ಈ ಹೊಸ ನಿರ್ಣಯವಾಗಬೇಕಿದೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ : ಕಾಂಗ್ರೆಸ್- ಬಿಜೆಪಿ ಶತ್ರುಗಳಲ್ಲ, ರಾಜಕೀಯ ವಿರೋಧಿಗಳಷ್ಟೆ : ಸಿ.ಟಿ.ರವಿ
ಇದೇ ವೇಳೆ ರಾಜ್ಯದ ಸಂಸದರ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್, ಕೇಂದ್ರ ಸರ್ಕಾರ ಕರ್ನಾಟಕವನ್ನು ಗುಲಾಮರ ರೀತಿ ನೋಡುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಪ್ರವಾಹ ಬಂದಿರುವ ಎಲ್ಲಾ ಕಡೆ ಹೋಗುತ್ತಾರೆ. ಆದ್ರೆ ಕರ್ನಾಟಕಕ್ಕೆ ಬರಲ್ಲ, ನಮ್ಮ ಎಂಪಿಗಳು ದನಕಾಯುತ್ತಿದ್ದಾರಾ? ಯಾಕೆ ಪ್ರಧಾನಿಯನ್ನು ಕರೆದುಕೊಂಡು ಬರುತ್ತಿಲ್ಲ ಎಂದು ಪ್ರಶ್ನಿಸಿದರು.
ಇನ್ನು ಅಕ್ಟೋಬರ್ 29 ರಂದು ಹುಬ್ಬಳ್ಳಿ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಮುಂದೆ ಸಂಸದರನ್ನು ಹಾರಾಜು ಹಾಕಿ ಪ್ರತಿಭಟನೆ ಮಾಡುತ್ತೇವೆ.
ಇದನ್ನೂ ಓದಿ : ಟೈಂ ಬಂದಾಗ ಬಂಡೆ ಕಥೆ ಹೇಳ್ತೇನೆ : ಬಿಜೆಪಿಗರಿಗೆ ಡಿಕೆಶಿ ಟಾಂಗ್
ಕೊಳ್ಳುವವರು ಬಂದು ಕೊಳ್ಳಬಹುದು, ವಿನೂತನ ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel