ವಾಟಾಳ್ ನಾಗರಾಜ್ ನಿನ್ಗೆ ತಾಕತ್ತಿದ್ರೆ ಬಂದ್ ಮಾಡು : ರೇಣುಕಾಚಾರ್ಯ
ದಾವಣಗೆರೆ : ಡೊಂಬರಾಟದ ವಾಟಾಳ್ ನಾಗರಾಜ್ ನಿನಗೆ ತಾಕತ್ತಿದ್ದರೆ ಈ ರಾಜ್ಯ ಬಂದ್ ಮಾಡು ನೋಡೋಣ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸವಾಲ್ ಹಾಕಿದ್ದಾರೆ.
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಖಂಡಿಸಿ ಕನ್ನಡಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
ಅಲ್ಲದೆ ಡಿಸೆಂಬರ್ 05 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿವೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಈ ಬಂದ್ ನಡೆಯಲಿದೆ.
ಈ ಮಧ್ಯೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ವಾಟಾಳ್ ನಾಗರಾಜ್ ಅವರಿಗೆ ಸವಾಲ್ ಎಸೆದಿದ್ದಾರೆ.
`ಕೈ’ಗೆ ನಾಚಿಕೆಯಾಗಬೇಕು ಎಂದ ವಿಜಯೇಂದ್ರಗೆ ಪ್ರಶ್ನೆಗಳ ಸುರಿಮಳೆಗೈದ ಉಗ್ರಪ್ಪ
ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಡೊಂಬರಾಟದ ವಾಟಾಳ್ ನಾಗರಾಜ್ ನಿನಗೆ ತಾಕತ್ತಿದ್ದರೆ ಈ ರಾಜ್ಯ ಬಂದ್ ಮಾಡು ನೋಡೋಣ. ಮುಖ್ಯಮಂತ್ರಿಗಳ ಬಗ್ಗೆ ಕೇವಲವಾಗಿ ಮಾತಾಡುತ್ತೀರಾ. ಹುಷಾರ್!” ಎಂದು ಎಚ್ಚರಿಕೆ ನೀಡಿದ್ದಾರೆ.
ವಾಟಾಳ್ ನಾಗರಾಜ್ ಬೂಟಾಟಿಕೆಯ ವ್ಯಕ್ತಿ. ಎಷ್ಟು ಅಕ್ರಮ ಮಾಡಿದ್ದಾರೆ ಎಂದರೆ ಮೈಸೂರಿನ ವರುಣ ಕ್ಷೇತ್ರದಲ್ಲಿ 70 ಎಕರೆ ಭೂಮಿ ಅಕ್ರಮವಾಗಿ ವಶ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಇನ್ನು ವಾಟಾಳ್ ನಾಗರಾಜ್ ಜಮೀನಿನಲ್ಲಿ ಕೆಲಸ ಮಾಡುತ್ತಿರುವುದು ತಮಿಳರು. ವಾಟಾಳ್ ಬೆಂಗಳೂರಿನಲ್ಲಿ ಎಷ್ಟು ಸೈಟ್ ಮಾಡಿದ್ದಾರೆ ಎಂಬ ಬಗ್ಗೆ ನನ್ನ ಕಡೆ ದಾಖಲೆಗಳಿವೆ. ಮುಖ್ಯಮಂತ್ರಿಗಳ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದ್ರೆ ಹುಷಾರ್ ಎಂದು ಎಚ್ಚರಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel