ಬೆಂಗಳೂರು : ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕೊರೊನಾಗೆ ಸೋಂಕಿಗೆ ಸೂಕ್ತ ಚಿಕಿತ್ಸೆ ಸಿಗದೆ ಪ್ರತಿದಿನ 100ಕ್ಕೂ ಅಧಿಕ ರೋಗಿಗಳು ರಾಜ್ಯದಲ್ಲಿ ಸಾವನ್ನಪ್ಪುತ್ತಿದ್ದಾರೆ. ಅವರ ಪ್ರಾಣ ಉಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕನ್ನಡ ಪರ ಹೋರಟಗಾರ ವಾಟಾಳ್ ನಾಗರಾಜ್ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಚಾಪೆ ಹಾಸಿ ಮಲಗಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸೋಂಕಿತರ ಪ್ರಾಣ ಉಳಿಸಿ ಎಂದು ಆಕ್ರೋಶ ಹೊರಹಾಕಿದರು.









