ಚಾಮರಾಜನಗರ: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್ ನಡೆಸಿದ್ದ ವಾಟಾಳ್ ನಾಗರಾಜ್, ಎರಡನೇ ಹಂತದ ಹೋರಾಟಕ್ಕೆ ಸಜ್ಜಾಗಿದ್ದಾರೆ. ಜನವರಿ 9 ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್, ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರದ ಆಕ್ರೋಶ ವ್ಯಕ್ತಪಡಿಸಿದರು. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಮುಂದಿನ ತಿಂಗಳು ಎರಡನೇ ಹಂತದ ಚಳವಳಿ ಆರಂಭಿಸಲಾಗುತ್ತಿದೆ. ಜನವರಿ 9 ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ ನಡೆಸಲಾಗುವುದು, ರಾಜ್ಯದ ಎಲ್ಲಾ ರೈಲು ನಿಲ್ದಾಣಗಳಲ್ಲಿ ಹಾಗು ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಹಾದು ಹೋಗಿರುವ ರೈಲು ಹಳಿಗಳ ಮೇಲೆ ಕುಳಿತು ಸತ್ಯಗ್ರಹ ನಡೆಸಿ ರೈಲು ತಡೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ 2 ಸಾವಿರ ಕನ್ನಡಪರ ಸಂಘಟನೆಗಳು ರೈಲು ತಡೆ ಚಳವಳಿಗೆ ಬೆಂಬಲ ನೀಡುತ್ತಿವೆ. ಅಂದು ಪ್ರಯಾಣಿಕರು ರೈಲು ನಿಲ್ದಾಣದ ಕಡೆ ಬರಬಾರದು ಎಂದು ವಾಟಾಳ್ ಮನವಿ ಮಾಡಿದ್ದಾರೆ.
ಯಡಿಯೂರಪ್ಪ ಅವರಿಗೆ ಹೊರನಾಡು ಗೊತ್ತಿಲ್ಲ, ಗಡಿನಾಡು ಗೊತ್ತಿಲ್ಲ. ಸಾಂಸ್ಕøತಿಕವಾದ ಚಿಂತನೆ ಇಲ್ಲ. ಬೆಳಗಾವಿಯಲ್ಲಿ ಬಹುಸಂಖ್ಯಾತರಿದ್ದಾರೆ ಎಂದು ನಿಗಮ ಮಾಡಲು ಹೊರಟಿದ್ದಾರೆ. ನಾಳೆ ತಮಿಳರು, ಮಾರ್ವಾಡಿಗಳಿಗೂ ನಿಗಮ ಕೊಡಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








