ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಯಲಹಂಕ ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧಿಸಿದ್ದಾರೆ ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಲಹಂಕ ಮೇಲ್ಸೆತುವೆಗೆ ವಿ.ಡಿ.ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನ. ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ರ್ಯಹೋರಾಟಗಾರರೊಬ್ಬರ ಹೆಸರಿಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ. ಆರ್.ಎಸ್.ಎಸ್ ಹೆಸರು ಪ್ರಸ್ತಾಪ ಮಾಡದೇ ಪರೋಕ್ಷವಾಗಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ ಸೂತ್ರಧಾರರೇ ಹೊರತು, ಚುನಾಯಿತ ಸರ್ಕಾರ ಅಲ್ಲ ಎನ್ನುವುದಕ್ಕೆ ಯಲಹಂಕ ಮೇಲ್ಸೆತುವೆಗೆ ಸಾವರ್ಕರ್ ಹೆಸರಿಡುವ ಅವಸರದ ನಿರ್ಧಾರವೇ ಪುರಾವೆ ಎಂದು ಆರ್.ಎಸ್.ಎಸ್ ಗೆ ಟಾಂಗ್ ಕೊಟ್ಟಿದ್ದಾರೆ. ಇಲ್ಲದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ನೀವು ವಿರೋಧ ಪಕ್ಷಗಳ ಸಹಕಾರ ಬಯಸುತ್ತಿರುವುದು ಇಂತಹ ಜನವಿರೋಧಿ ನಿರ್ಧಾರಗಳಿಗಾಗಿಯೇ? ಎಂದು ಪ್ರಶ್ನಿಸಿದ್ದಾರೆ.
ಕೇಜ್ರಿವಾಲ್ ಜೈಲಿನಿಂದ ಆಡಳಿ ನಡೆಸುವಂತಿಲ್ಲ; ಗವರ್ನರ್ ಸಕ್ಸೇನಾ
ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಲ್ಲಿಂದಲೇ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ. ಈಗ ಅರವಿಂದ್...