ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಯಲಹಂಕ ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಯಲಹಂಕ ಮೇಲ್ಸೇತುವೇಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯದಯಕ್ಕೆ ಹೋರಾಟ ಮಾಡಿದವರಿಗೆ ಅಪಮಾನ ಮಾಡಿದಂತೆ. ಅಲ್ಲದೆ ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಸ್ವಾತಂತ್ರ್ಯಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹ ಪಡಿಸುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುವುದು ಸಾಮಾನ್ಯ. ಆದರೆ ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ಸರ್ಕಾರಿ ಬಂಗಲೆಗಾಗಿ ಜಂಗೀ ಕುಸ್ತಿ...








