Veera mahanta Shivacharya : ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ
ಬೆಂಗಳೂರು : ವೀರಮಹಾಂತ ಶಿವಾಚಾರ್ಯ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.. ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದಾಗ ಕುಸಿದು ಬಿದ್ದ ಸ್ವಾಮೀಜಿಗಳು ಕೊನೆಯುಸಿರೆಳೆದಿದ್ದಾರೆ..
ಹೃದಯಾಘಾತಕ್ಕೀಡಾಗಿದ್ದ ಸ್ವಾಮೀಜಿಯವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆ ಅವರು ಲಿಂಗೈಕ್ಯರಾಗಿದ್ದಾರೆಂದು ತಿಳಿದುಬಂದಿದೆ..
ಬೆಂಗಳೂರಿನಿಂದ ಯಾದಗಿರಿಗೆ ತೆರಳಲು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ವೇಳೆ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿಗಳು ಹೃದಯಾಘಾತಕ್ಕೀಡಾಗಿ ಏಕಾಏಕಿ ಕುಸಿದು ಬಿದ್ದಿದ್ದರು.
ಈ ವೇಳೆ ಸ್ವಾಮೀಜಿಗಳ ಜೊತೆಗಿದ್ದ ಭಕ್ತರು ಅವರನ್ನು ಬದುಕುಳಿಸಲು ಯತ್ನಿಸಿದ್ದರು. ಪ್ರಥಮ ಚಿಕಿತ್ಸೆ ಹಾಗೂ ಸಿಪಿಆರ್ ನೀಡಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ದಾರಿ ಮಧ್ಯೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ಮುಂದಿನ ತಿಂಗಳಲ್ಲಿ ತಮ್ಮ 25 ನೇ ಪಟ್ಟಾಧಿಕಾರ ಮಹೋತ್ಸವ ಆಯೋಜನೆ ಮಾಡಿದ್ದರು. ಇದೇ ಕಾರ್ಯಕ್ರಮಕ್ಕೆ ಬಿ ವೈ ವಿಜಯೇಂದ್ರ- ಸೇರಿ ಹಲವು ಗಣ್ಯರನ್ನು ಆಹ್ವಾನಿಸಲು ಅವರು ಬೆಂಗಳೂರಿಗೆ ಆಗಮಿಸಿದ್ದರು. ಆಹ್ವಾನ ನೀಡುವ ಕಾರ್ಯ ಮುಗಿಸಿ ಮರಳಿ ಯಾದಗಿರಿಗೆ ತೆರಳಲು ಹೊರಟ್ಟಿದ್ದಾಗ ಈ ಘಟನೆ ಸಂಭವಿಸಿದೆ..