ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ
ಬೆಂಗಳೂರು : ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಸಮಾಜದ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ.
ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ಬೆನ್ನಲ್ಲೇ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಪಕ್ಷಾತೀತವಾಗಿ ಆಗ್ರಹ ಕೇಳಿಬಂದಿತ್ತು.
ಬೆಂಗಳೂರಿನ ದಕ್ಷಿಣದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ; ರ‍್ಯಾಪಿಡ್ ಟೆಸ್ಟ್ ಮೊರೆ ಮೋದ ಬಿಬಿಎಂಪಿ..!
ನಿನ್ನೆ ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಲಿಂಗಾಯತ ಅಭಿವೃದ್ಧಿ ನಿಗಮದ ಜೊತೆಗೆ, ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಕಲ್ಪಿಸಿಕೊಂಡುವಂತೆ ಮನವಿ ಮಾಡಿದ್ದರು.
ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ವೀರಶೈವ- ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅಂತ್ಯಂತ ಹಿಂದುಳಿದವರಿದ್ದಾರೆ.
ಈ ಸಮಾಜದ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಅಗತ್ಯವಿದೆ. ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಆದೇಶಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









